ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ವಿಶೇಷ ತರಬೇತಿಗೆ ವ್ಯವಸ್ಥೆ- ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣ
ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Published: 30th January 2022 01:26 PM | Last Updated: 30th January 2022 01:26 PM | A+A A-

ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಬೆಂಗಳೂರು: ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಹೆಚ್ಚಾಗಿ ಈ ಅರ್ಜಿಗಳಲ್ಲಿ ವಾರ್ಷಿಕ ಆದಾಯ. ಕೆಟಗರಿ , ಹೆಸರು, ಹುಟ್ಟಿದ ದಿನಾಂಕ, ಕೋರ್ಸ್ ಆಯ್ಕೆ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡುವಾಗ ತಪ್ಪು ಮಾಡುತ್ತಿರುವುದು ಕಂಡುಬಂದಿದೆ. ಇದಿಂದಾಗಿ ಹೆಚ್ಚಿನ ಅರ್ಜಿಗಲು ತಿರಸ್ಕೃತವಾಗುತ್ತಿದ್ದು, ಉನ್ನತ ಶಿಕ್ಷಣದ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಗಮನಿಸಿ ' ಗೆಟ್ ಸೆಟ್ ಗೋ ಮೂಲಕ ಈ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.
' ಗೆಟ್ ಸೆಟ್ ಗೋ' ಮೂಲಕ ಈ ಪರೀಕ್ಷೆಗಳಿಗೆ ಹೆಚ್ಚಾಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು, ಇವರಿಗೆ ಈ ತರಬೇತಿಯ ಪ್ರಯೋಜನವಾಗಲಿದೆ. ತರಬೇತಿಯ ಜೊತೆಗೆ ಸಾಮಾಜಿಕ ಮಾಧ್ಯಮಗಳು, ವೆಬ್ ಸೈಟ್ ಗಳು ಮತ್ತು ದಿನಪತ್ರಿಕೆಗಳಲ್ಲಿ ಈ ಅರ್ಜಿ ತುಂಬುವ ಸರಿಯಾದ ವಿಧಾನದ ಬಗ್ಗೆ ವ್ಯಾಪಕವಾಗಿ ಜಾಹೀರಾತು ಕೊಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.