ಬೆಂಗಳೂರು: ರಸೆಲ್ ಮಾರ್ಕೆಟ್ ಸ್ಮಾರ್ಟ್ ಪ್ಲಾಝಾ ಏಪ್ರಿಲ್ ವೇಳೆಗೆ ಪೂರ್ಣ
ಬಿಬಿಎಂಪಿಯೊಂದಿಗೆ ಕೈ ಜೋಡಿಸಿರುವ ಬೆಂಗಳೂರು ಸ್ಮಾರ್ಟ್ ಸಿಟಿ ತಂಡವು ರಸೆಲ್ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಪ್ಲಾಜಾ ಯೋಜನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯೋಜನೆಯು ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.
Published: 31st January 2022 07:58 AM | Last Updated: 31st January 2022 01:45 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಬಿಬಿಎಂಪಿಯೊಂದಿಗೆ ಕೈ ಜೋಡಿಸಿರುವ ಬೆಂಗಳೂರು ಸ್ಮಾರ್ಟ್ ಸಿಟಿ ತಂಡವು ರಸೆಲ್ ಮಾರುಕಟ್ಟೆಯಲ್ಲಿ ಸ್ಮಾರ್ಟ್ ಪ್ಲಾಜಾ ಯೋಜನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯೋಜನೆಯು ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.
ಸುಮಾರು 7 ಕೋಟಿ ವೆಚ್ಚದ ಒಂದು ಅಂತಸ್ತಿನ ಪ್ಲಾಜಾ ನಿರ್ಮಿಸಲಾಗುತ್ತಿದ್ದು, ಈ ಯೋಜನೆಯು ಏಪ್ರಿಲ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆದರೆ, ಪ್ಲಾಜಾ ನಿರ್ಮಾಣದ ವಿಧಾನಗಳು ಇನ್ನೂ ಅಂತಿಮಗೊಂಡಿಲ್ಲ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: 'ಸ್ಮಾರ್ಟ್ ಸಿಟಿ' ಯೋಜನೆ ಪರಿಶೀಲಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮೆಟ್ರೋ ಕಾಮಗಾರಿ ತ್ವರಿತಗೊಳಿಸಲು ಸೂಚನೆ
ಗ್ರಾನೈಟ್ ಸ್ಲ್ಯಾಬ್ ಫ್ಲೋರಿಂಗ್ ಹಾಕುವ ಕುರಿತು ಪ್ರಸ್ತಾಪಿಸಿದ್ದೇವೆ. ಇದದು ನೆಲಮಾಳಿಗೆ ಮತ್ತು ಮಹಡಿಯ ನೆಲಗಳಿಗೆ ಹಾಕಲಾಗುತ್ತದೆ. ಆದರೆ, ಈ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ನೆಲಮಾಳಿಗೆಯಲ್ಲಿ ಪಾರ್ಕಿಂಗ್ ಮಾಡಲು ಯೋಜಿಸಿದ್ದೇವೆ. ಪ್ಲಾಜಾದಲ್ಲಿ ಜನರಿಗೆ ಕುಳಿತುಕೊಳ್ಳಲು ಆಸನ ಮತ್ತು ಕ್ಯಾಂಟೀನ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಮಾರಾಟಗಾರರಿಗೆ ಇಲ್ಲಿ ಜಾಗವನ್ನು ನೀಡಲಾಗುವುದಿಲ್ಲ ಎಂದು ಸ್ಮಾರ್ಟ್ ಸಿಟಿ ಎಂಜಿನಿಯರ್ ಮಾಹಿತಿ ನೀಡಿದ್ದಾರೆ.
ಯೋಜನೆ ಕುರಿತು ಯಾವುದೇ ಸ್ಪಷ್ಟ ಮಾಹಿತಿಗಳು ಇಲ್ಲ, ಆದರೆ ಸ್ಮಾರ್ಟ್ ಸಿಟಿ ತಂಡದೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದೆ. ಸಾರ್ವಜನಿಕ ಶೌಚಾಲಯದ ಜಾಗವನ್ನು ಪ್ಲಾಜಾಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.