ಜಿಎಸ್‌ಟಿ ಪರಿಹಾರ ಕನಿಷ್ಠ ಐದು ವರ್ಷ ವಿಸ್ತರಿಸದಿದ್ದರೆ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರು. ನಷ್ಟ: ಸಿದ್ದರಾಮಯ್ಯ

ರಾಜ್ಯಗಳಿಗೆ ನೀಡುವ ಜಿಎಸ್‌ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ  20 ಸಾವಿರ ಕೋಟಿ ರು. ನಷ್ಟ ಆಗಲಿದೆ’ ಎಂದು  ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಗಳಿಗೆ ನೀಡುವ ಜಿಎಸ್‌ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ  20 ಸಾವಿರ ಕೋಟಿ ರು. ನಷ್ಟ ಆಗಲಿದೆ’ ಎಂದು  ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ದೆಹಲಿಯಲ್ಲಿ ಮಾತನಾಡಿದ ಅವರು, ‘ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ಶೇ 14ರಷ್ಟು ನಷ್ಟ ಪರಿಹಾರ ನೀಡುವ ವ್ಯವಸ್ಥೆ 2017ರ ಜುಲೈನಲ್ಲಿ ಆರಂಭವಾಯಿತು. ಈ ವ್ಯವಸ್ಥೆ ಗುರುವಾರ ಕೊನೆಗೊಂಡಿದೆ. ಈ ವ್ಯವಸ್ಥೆ ಮುಂದುವರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಎಸ್‌ಟಿ ಸಭೆಯಲ್ಲಿ ಒತ್ತಡ ಹೇರಿಲ್ಲ. ಇದು ರಾಜ್ಯಕ್ಕೆ ಬೊಮ್ಮಾಯಿ ಮಾಡಿರುವ ಅನ್ಯಾಯ’ ಎಂದು ಟೀಕಿಸಿದರು.

ಜಿಎಸ್‌ಟಿ ಜಾರಿಯ ಮೊದಲು ಶೇ 14 ಇದ್ದ ತೆರಿಗೆ ಬೆಳವಣಿಗೆ ದರ ಈಗ ಶೇ 6ಕ್ಕೆ ಇಳಿದಿದೆ. ಇದಕ್ಕೆ ಕೋವಿಡ್‌ ನೆಪ ಹೇಳುತ್ತಿದ್ದಾರೆ. ರಾಜ್ಯಗಳಿಗೆ ತೆರಿಗೆ ಸಂಗ್ರಹ ಕಡಿಮೆ ಆಗಿರುವುದರಿಂದ ಈ ನಷ್ಟ ತುಂಬಿಕೊಡಬೇಕಾದವರು ಯಾರು? ಕೇಂದ್ರ ಸರ್ಕಾರ ಅಲ್ಲವೇ?’ ಎಂದು ಅವರು ಪ್ರಶ್ನಿಸಿದರು.

'ಕೆಲವು ವಸ್ತುಗಳ ಮೇಲಿನ ಜಿಎಸ್‌ಟಿ ತೆರಿಗೆಯನ್ನು ಭಾರಿ ಹೆಚ್ಚಳ ಮಾಡಲಾಗಿದೆ. ರೈತರು ಹಾಗೂ ಜನಸಾಮಾನ್ಯರು ಹೊಲ ಗದ್ದೆಗಳಲ್ಲಿ ಬಳಸುವ ಸಬ್‌ ಮೆರಿನ್‌ ಪಂಪ್‌ಗಳ ಮೇಲೆ ಶೇ 12 ಇದ್ದ ತೆರಿಗೆಯನ್ನು ಶೇ 15ಕ್ಕೆ ಏರಿಸಿದ್ದಾರೆ. ಹಣ್ಣು, ತರಕಾರಿ ಮತ್ತು ಮೊಟ್ಟೆಗಳನ್ನು ಪ್ರತ್ಯೇಕಗೊಳಿಸುವ, ಗ್ರೇಡಿಂಗ್‌ ಹಾಗೂ ಹಾಲು ಕರೆಯುವ ಯಂತ್ರಗಳ ಮೇಲೆ ಇದ್ದ ತೆರಿಗೆಯನ್ನು ಶೇ 12ರಿಂದ 18ಕ್ಕೆ ಏರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com