ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1008 ಸೇರಿ ರಾಜ್ಯದಲ್ಲಿ 1073 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1073 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,70,484ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1073 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,70,484ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40076ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1008 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,050,99ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 834 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,24,232ಕ್ಕೆ ಏರಿಕೆಯಾಗಿದೆ. ಇನ್ನು 6134 ಸಕ್ರಿಯ ಪ್ರಕರಣಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com