ಬೀದರ್‌ನ ಬಹುದಿನಗಳ ಬೇಡಿಕೆ ಈಡೇರಿಕೆ: ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ..
ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ
ಮಹಿಳಾ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಪೂಜೆ

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾಗಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ಭೂಮಿ ಪೂಜಾ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಭಗವಂತ ಖೂಬಾ ಹಾಗೂ ಬಂಡೆಪ್ಪ ಖಾಶೆಂಪುರ್ ನೆರವೇರಿಸಿದರು.

ಬಳಿಕ ಮಾತನಾಡಿದ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಬೀದರ್ ಜಿಲ್ಲೆಯಲ್ಲಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ನಿರ್ಮಾಣವಾಗುತ್ತಿರುವುದು ಸಂತಸದ ವಿಷಯವಾಗಿದೆ. ಪ್ರಾದೇಶಿಕ ಕೇಂದ್ರ ನಿರ್ಮಾಣದಿಂದ ಈ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಈ ಪ್ರಾದೇಶಿಕ ಕೇಂದ್ರ ಒಳ್ಳೆಯ ಉತ್ತಮ ಕೇಂದ್ರವಾಗಲಿದೆ ಎಂದರು.

ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಮತ್ತು ಸಂಸದರ ನಿಧಿಯಿಂದ ಸಾಧ್ಯವಾದಷ್ಟು ಅನುದಾನ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತೇನೆ. ನಾವೆಲ್ಲರೂ ಸೇರಿ ಬೀದರ್ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವ ಪ್ರಾದೇಶಿಕ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿಸುವ ಕೆಲಸ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾರವರು ಹೇಳಿದರು.

ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮಾತನಾಡಿ, ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಬೇಕು. ಆ ನಿಟ್ಟಿನಲ್ಲಿ ಇದು ರಾಜ್ಯಕ್ಕೆ ಮಾದರಿಯಾಗಬೇಕು. ಬೀದರ್ ಜಿಲ್ಲೆಗೆ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತರುವ ನಿಟ್ಟಿನಲ್ಲಿ ಬಹಳಷ್ಟು ಶ್ರಮಿಸಲಾಗಿದೆ. ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಿಂದ ಪ್ರಾದೇಶಿಕ ಕೇಂದ್ರಕ್ಕೆ ಭೂಮಿ ಲಭ್ಯವಾಗಿದೆ ಎಂದರು.

ಪ್ರಾದೇಶಿಕ ಕೇಂದ್ರ ಕೇವಲ ಪ್ರಾದೇಶಿಕ ಅಧ್ಯಯನ ಕೇಂದ್ರವಾಗಿರಬಾರದು. ದಿನದಿಂದ ದಿನಕ್ಕೆ ಬದಲಾವಣೆಗಳೊಂದಿಗೆ ವಿನೂತನ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಸಾಗಬೇಕು. ಆ ಮೂಲಕ ಈ ಭಾಗದ ಹೆಣ್ಣು ಮಕ್ಕಳು ರಾಜ್ಯಕ್ಕೆ ಮಾದರಿಯಾಗಬೇಕು. ವಿಶ್ವವಿದ್ಯಾಲಯದ ಬೆಳವಣಿಗೆಗೆ ಸಹಕಾರಿಯಾಗಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com