ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಗೆ 14 ದಿನಗಳ ನ್ಯಾಯಾಂಗ ಬಂಧನ
ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Published: 04th July 2022 11:39 PM | Last Updated: 05th July 2022 12:12 AM | A+A A-

ಐಎಎಸ್ ಅಧಿಕಾರಿ ಮಂಜುನಾಥ್
ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಿಸಿಹೆಚ್ 24ರ ಎಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್ ಈ ಆದೇಶ ಪ್ರಕಟಿಸಿದ್ದಾರೆ. ಲಂಚ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಂಜುನಾಥ್ ಅವರನ್ನು ಕೋರಮಂಗಲದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಮಂಜುನಾಥ್ ಅವರನ್ನು ಹಾಜರುಪಡಿಸಲಾಯಿತು.
ಇದನ್ನೂ ಓದಿ: 5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ
ನ್ಯಾಯಾಧೀಶರು ಜುಲೈ 16 ರವರೆಗೂ ಮಂಜುನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದ್ದಾರೆ. ಇದರಿಂದಾಗಿ ಐಎಎಸ್ ಅಧಿಕಾರಿ ಮಂಜುನಾಥ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದರು.