ಕಾಲೇಜುಗಳಲ್ಲಿಯೂ 'ಹರ್ ಘರ್ ತಿರಂಗಾ ಕಾರ್ಯಕ್ರಮ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ  17ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.
ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಡಾ.ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ಅಮೃತ ಸ್ವಾತಂತ್ರೋತ್ಸವದ ಪ್ರಯುಕ್ತ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ  17ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಉನ್ನತ ಶಿಕ್ಷಣ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಗಳ ವ್ಯಾಪ್ತಿಯಲ್ಲಿ ಯಶಸ್ವಿಗೊಳಿಸಲು ಸುತ್ತೋಲೆ ಹೊರಡಿಸಲಾಗಿದೆ.

ಹರ್ ಘರ್ ತಿರಂಗಾ ಕಾರ್ಯಕ್ರಮದಡಿ  ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಕರೆ ನೀಡಲಾಗಿದೆ.  ಇದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ವಿಶ್ವವಿದ್ಯಾನಿಲಯಗಳು, ಸರ್ಕಾರಿ ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

 ತರಗತಿಗಳ ಸಮಯದಲ್ಲಿ ಈ ಬಗ್ಗೆ ತಿಳಿಸಬೇಕು. ಸೂಚನಾ ಫಲಕಗಳಲ್ಲಿ ಮಾಹಿತಿ ಹಾಕಬೇಕು, ಆಯಾ ಕಾಲೇಜುಗಳ ವಾಹನಗಳ ಮೇಲೆ ಧ್ವಜ ಅಳವಡಿಸಲು ತಿಳಿಸಬೇಕು ಹಾಗೂ ಈ ಸಂಬಂಧ  ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ವಾರದ ಕೊನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ ಸೈಟ್ Kanbahvblr@gmail.comಗೆ ಅಪ್ ಲೋಡ್ ಮಾಡಬೇಕು ಎಂದು ಸೂಚಿಸಲಾಗಿದೆ.

ತಂತಮ್ಮ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸಲು ಬೋಧಕರು, ಬೋಧಕೇತರರು ವಿದ್ಯಾರ್ಥಿಗಳನ್ನು ಮತ್ತು ಸಂಸ್ಥೆಗಳ ವಾಹನ ಚಾಲಕರನ್ನು ಪ್ರೇರೇಪಿಸಬೇಕು. ಕೇಂದ್ರ ಸರ್ಕಾರ Amritmahostav.nic.in ಜಾಲತಾಣದಲ್ಲಿ ಹರ್ ಘರ್ ತಿರಂಗಾ ಅಡಿಯಲ್ಲಿ ಈ ಸಂಬಂಧವಾಗಿ ಇರುವ ಬ್ಯಾನರ್ ಮತ್ತು ಫೋಸ್ಟರ್ ಗಳ ಮಾದರಿಯನ್ನು ಉಪಯೋಗಿಸಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com