ಐಎಎಸ್ ಅಧಿಕಾರಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸೇವೆಯಿಂದ ಅಮಾನತು
ಬೆಂಗಳೂರು: ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಹಾಗೂ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಮಂಜುನಾಥ್ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು, ಎಸಿಬಿಯಿಂದ ಬಂಧನಕ್ಕೊಳಗಾದ ನಂತರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದ ನಂತರ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.
ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ