ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40080 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1053 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,09,240ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1044 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,28,397ಕ್ಕೆ ಏರಿಕೆಯಾಗಿದೆ. ಇನ್ನು 6481 ಸಕ್ರಿಯ ಪ್ರಕರಣಗಳಿವೆ.
Advertisement