ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ಸುಂದರ ಪುರುಷರ ಫೋಟೋ ಅಪ್ ಲೋಡ್ ಮಾಡಿ ಮಹಿಳೆಯರಿಗೆ ವಂಚಿಸುತ್ತಿದ್ದಾತ ಅಂದರ್!
ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
Published: 06th July 2022 02:08 PM | Last Updated: 06th July 2022 02:21 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ಸುಂದರ ಪುರುಷರ ಚಿತ್ರಗಳನ್ನು ಪೋಸ್ಟ್ ಮಾಡುವ ಮೂಲಕ ಮಹಿಳೆಯರನ್ನು ವಂಚಿಸುತ್ತಿದ್ದ 39 ವರ್ಷದ ಸೈಬರ್ ಕ್ರಿಮಿನಲ್ ಒಬ್ಬನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ತಿಪಟೂರಿನ ವಿದ್ಯಾನಗರದ ನಿವಾಸಿಯಾಗಿರುವ ಆರೋಪಿ ನವೀನ್ ವೈ ಸಿಂಗ್ ಎಂಬಾತ, ಅಪರಿಚಿತ ಪುರುಷರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಿಂದ ಪಡೆದು ವೈವಾಹಿಕ ತಾಣಗಳಲ್ಲಿ ಪೋಸ್ಟ್ ಮಾಡಿ ವಂಚಿಸುತ್ತಿದ್ದ.
ವೈವಾಹಿಕ ತಾಣದಗಳಲ್ಲಿ ಮಹಿಳೆಯರ ಫೋನ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಿದ ನಂತರ, ಅವನು ಅವರಿಗೆ ನಿಯಮಿತವಾಗಿ ಕರೆ ಮಾಡುತ್ತಿದ್ದ. ಇದರ ಜೊತೆಗೆ ಮದುವೆಯ ದಿನಾಂಕವನ್ನು ಅಂತಿಮಗೊಳಿಸುವವರೆಗೂ ಮಹಿಳೆಯರ ಮನೆಗೆ ಭೇಟಿ ನೀಡುವುದನ್ನು ಮುಂದೂಡುತ್ತಲೇ ಇದ್ದನು.
ತಾನು ಎಂಎನ್ ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ ಆರೋಪಿ, ಗೃಹೋಪಯೋಗಿ ವಸ್ತುಗಳ ಮೇಲೆ ಉತ್ತಮ ರಿಯಾಯಿತಿ ಪಡೆದಿದ್ದಾಗಿ ಹೇಳಿದ್ದ. 24 ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬಳು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಸುಮಾರು 7 ಲಕ್ಷ ರೂಪಾಯಿ ಹಣ ನೀಡಿ ಕಳೆದುಕೊಂಡಿದ್ದಾಳೆ. ಈತ ದೇಶಾದ್ಯಂತ ಮಹಿಳೆಯರಿಗೆ ಮೋಸ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ: ದುಬೈ ಆಸ್ಪತ್ರೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ವೈದ್ಯೆಗೆ 11 ಲಕ್ಷ ರೂ. ವಂಚನೆ: ಪೊಲೀಸರಿಗೆ ದೂರು
ರಾಮನಗರದ ಕಾನೂನು ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಪ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನವೀನ್ ಎಂಬಾತನನ್ನು ಬಂಧಿಸಲಾಗಿದೆ. ಮಹಿಳೆಯರಲ್ಲಿ ಆಸಕ್ತಿ ಮೂಡಿಸಲು ಮತ್ತು ಬಂಧನದಿಂದ ಪಾರಾಗಲು ತನ್ನ ಪ್ರೊಫೈಲ್ ಚಿತ್ರದ ಬದಲಿಗೆ ಸುಂದರ ಪುರುಷರ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿದ್ದ. ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿ ಮಹಿಳೆಯರನ್ನು ವಂಚಿಸುತ್ತಿದ್ದ’ ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ತಿಳಿಸಿದರು.
ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ಕಂಡಕ್ಟರ್‌ಗಳಿಂದ ತಮ್ಮ ಆಯ್ಕೆಯ ಸ್ಥಳಗಳಿಗೆ ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ತನ್ನ ತಂದೆಯ ಚಿಕಿತ್ಸೆಗಾಗಿ ಮತ್ತು ಅವನ ಕೆಟ್ಟ ಚಟಗಳಿಗಾಗಿ ಈ ಹಣವನ್ನುದುರುಪಯೋಗ ಪಡಿಸಿಕೊಂಡಿದ್ದಾನೆ.
ಮುಂಬೈ, ಗುಜರಾತ್, ಛತ್ತೀಸ್‌ಗಢ, ಪುಣೆ, ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೆಲವು ಪೊಲೀಸ್ ಠಾಣೆಗಳಲ್ಲಿ ದಾಖಲಾದ 28 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.