
ಸಾಂದರ್ಭಿಕ ಚಿತ್ರ
ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ. ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.
ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ಸಹ ತಿಳಿಸಿದ್ದಾರೆ.
ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 'ಪರಿಷ್ಕರಣೆ' ಮಾಡಲಾಗಿದ್ದು, ₹9,000 ದಿಂದ ₹12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು '3,708 ಅತಿಥಿ ಉಪನ್ಯಾಸಕ'ರ ಸೇವೆಯನ್ನು ಪಡೆಯಲಾಗುತ್ತಿದೆ.@BSBommai— B.C Nagesh (@BCNagesh_bjp) July 6, 2022