ಕೋವಿಡ್-19: ಬೆಂಗಳೂರಿನಲ್ಲಿ 932 ಸೇರಿ ರಾಜ್ಯದಲ್ಲಿ 1,037 ಹೊಸ ಕೇಸ್ ಪತ್ತೆ, ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,037 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,77,090ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,037 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,77,090ಕ್ಕೆ ಏರಿಕೆಯಾಗಿದೆ.

984 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,506 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ  932 ಹೊಸ ಪ್ರಕರಣ ಪತ್ತೆಯಾಗಿದ್ದು, 902 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. 6,062 ಸಕ್ರಿಯ ಪ್ರಕರಣಗಳಿವೆ. ಇಂದು ರಾಜ್ಯದಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಇಂದು 24,436 ಕೊರೋನಾ ಪರೀಕ್ಷೆ ನಡೆಸಲಾಗಿದೆ.  ಸೋಂಕಿನ ಪ್ರಮಾಣ ಶೇ. 3.84ರಷ್ಟಿದ್ದು, ಮರಣ ಪ್ರಮಾಣ 0.09ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com