ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!

ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ಸಮಾಜಕಲ್ಯಾಣ ವಿಭಾಗದ ವತಿಯಿಂದ 1.80 ಲಕ್ಷ ಜನರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ವಿಶೇಷ ಆಯುಕ್ತ ಡಾ. ವಿ. ರಾಮ್‌ಪ್ರಸಾದ್‌ ಮನೋಹರ್‌ ಹೇಳಿದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ಸಮಾಜಕಲ್ಯಾಣ ವಿಭಾಗದ ವತಿಯಿಂದ 1.80 ಲಕ್ಷ ಜನರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ವಿಶೇಷ ಆಯುಕ್ತ ಡಾ. ವಿ. ರಾಮ್‌ಪ್ರಸಾದ್‌ ಮನೋಹರ್‌ ಹೇಳಿದರು.

ಈ ಮೊದಲು 55 ಸಾವಿರ ಜನರಿಗೆ ಸೌಲಭ್ಯ ಕಲ್ಪಿಸುವ ಯೋಜನೆ ಇತ್ತು. ಅದನ್ನು 1.80 ಲಕ್ಷ ಜನರಿಗೆ ಹೆಚ್ಚಿಸಿ, ಅದರ ಸಮ್ಮತಿಗೆ ಕಳುಹಿಸಲಾಗಿದೆ. ಫಲಾನುಭವಿಗಳಿಗೆ ಇದನ್ನು ತಲುಪಿಸುವ ಕಾರ್ಯ ಆರಂಭವಾಗಿದೆ’ ಎಂದರು.

ಮುಂದಿನ ವಾರ ಸಿಟಿ ಮಾರುಕಟ್ಟೆಯಲ್ಲೂ ಕಾರ್ಯಕ್ರಮ ಆಯೋಜಿಸಲಾಗಿದೆ. ಬೀದಿ ವ್ಯಾಪಾರಿಗಳು ಇರುವ ಕಡೆಯೇ ಸಹಾಯ ಕೇಂದ್ರ ತೆರೆಯಲಾಗುತ್ತದೆ. ಅರ್ಜಿ ಪಡೆದು, ಸಾಲ ವಿತರಿಸುವ ಕೆಲಸವನ್ನೂ ಅಲ್ಲೇ ಮಾಡಲಾಗುತ್ತದೆ ಎಂದು ತಿಳಿಸಿದರು.

ಬ್ಯಾಂಕ್‌ಗಳಲ್ಲಿ ಬೀದಿ ವ್ಯಾಪಾರಿಗಳು ಸಾಲ ಪಡೆಯಲು ಸಾಕಷ್ಟು ಪ್ರಯಾಸ ಪಡಬೇಕು. ಆದರೆ ಈ ಯೋಜನೆಯಲ್ಲಿ ಅವರಿಗೆ ಸುಲಭ ಹಾಗೂ ತುರ್ತಾಗಿ ಸಾಲ ಲಭ್ಯವಾಗಲಿದೆ ಎಂದು ತಿಳಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳಿಗೆ ಅನುಮತಿ ನೀಡಲು ಕೆಲವು ಇತಿಮಿತಿಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲದಕ್ಕೂ ಒಂದೇ ರೀತಿಯ ಮಾನದಂಡ ಇರುವುದಿಲ್ಲ. ಅದು ಆಯಾ ಪ್ರಕರಣ ಆಧಾರವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಎಂಪಿ ವತಿಯಿಂದ ಜಿಎಸ್‌ಟಿ ಪಾವತಿಸುವುದು ಕಡಿಮೆಯಾಗಿದೆ ಎಂಬ ದೂರಿದೆ. ಆದರೆ ಇದು ಯಾವ ಪ್ರಕರಣ ಎಂದು ಪರಿಶೀಲಿಸಬೇಕಾಗಿದೆ. ಕೆಲವು ಕಾಮಗಾರಿಗಳಿಗೆ, ಗುತ್ತಿಗೆದಾರರಿಗೆ ವಿನಾಯಿತಿ ಇದೆ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಲು ಸಾಧ್ಯವಿಲ್ಲ. ಎಲ್ಲವೂ ಆನ್‌ಲೈನ್‌ನಲ್ಲೇ ಇರುತ್ತದೆ. ಅಲ್ಲದೆ ಆಡಿಟ್‌ ಕೂಡ ಆಗುತ್ತದೆ’ ಎಂದು ರಾಮ್‌ಪ್ರಸಾದ್‌ ವಿವರ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com