ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್: ಹಾನಿ, ಪರಿಹಾರ ಕುರಿತು ಚರ್ಚೆ

ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಗೃಹ ಕಚೇರಿ ಕೃಷ್ಣಾದಿಂದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆಯಿಂದಾಗಿರುವ ಹಾನಿ ಹಾಗೂ ಪರಿಹಾರ ಕುರಿತು ಚರ್ಚೆ ನಡೆಸಿದರು.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿನ ಸಭೆ
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿನ ಸಭೆ

ಬೆಂಗಳೂರು: ಮಳೆ ಪೀಡಿತ 13 ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಗೃಹ ಕಚೇರಿ ಕೃಷ್ಣಾದಿಂದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆಯಿಂದಾಗಿರುವ ಹಾನಿ ಹಾಗೂ ಪರಿಹಾರ ಕುರಿತು ಚರ್ಚೆ ನಡೆಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ,  ಮಲೆನಾಡು, ಕರಾವಳಿಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಮೂರು ಹಂತದಲ್ಲಿ ಮಳೆಯಾಗುತ್ತಿದ್ದು, ಮೂರ್ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದರು.

13 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. 17 ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ. ಜೂನ್ ನಿಂದ 12 ಜನರು,  65 ಜಾನುವಾರಗಳು ಸಾವಿಗೀಡಾಗಿವೆ. ಮಣ್ಣು ಕುಸಿತ ಆಗುವ ಕೆಳಗಿನ ಜನರನ್ನು ಸ್ಥಳಾಂತರ ಮಾಡಲು ಸೂಚಿಸಲಾಗಿದೆ. ಮನೆ ಹಾನಿಯಾಗಿದ್ದರೆ ತಕ್ಷಣ 10 ಸಾವಿರ ರೂಪಾಯಿ ನೀಡಲು ತೀರ್ಮಾನಿಸಲಾಗಿದೆ. ಮಳೆ ನಿಂತ ನಂತರ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದರು.

ಉತ್ತರ ಕನ್ನಡ, ಮಂಗಳೂರು ಹಾಗೂ ಕೊಡಗಿನಲ್ಲಿ ಎನ್ ಡಿಆರ್ ಎಫ್ ತಂಡ ಕಾರ್ಯನಿರ್ವಹಿಸುತ್ತಿವೆ. ಇನ್ನು ವಿದ್ಯುತ್ ಕಂಬಗಳನ್ನು ಸರಿಪಡಿಸಲು ಎಸ್ಕಾಂ ಎಂಡಿಗಳಿಗೆ ಸೂಚಿಸಲಾಗಿದೆ. ಕಡಲ ಕೊರೆತ ಉಂಟಾದರೆ ತಾತ್ಕಾಲಿಕವಾಗಿ ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಎರಡು ಮೂರು ದಿನದಲ್ಲಿ ಪೂರ್ಣ ನಷ್ಟ ಪತ್ತೆ ಹಚ್ಚಲಾಗುವುದು, ಮಹಾರಾಷ್ಟ್ರದ ಕೊಯ್ನಾದಿಂದ ಇನ್ನೂ ನೀರು ಬಿಟ್ಟಿಲ್ಲ. ಕೊಲ್ಲಾಪುರ, ಸೊಲ್ಲಾಪುರ ಡಿಸಿಗಳ ಜೊತೆಗೆ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ, ಕಾರ್ಯದರ್ಶಿಗಳು ಸಂಪರ್ಕದಲ್ಲಿರುತ್ತಾರೆ ಎಂದು ಹೇಳಿದರು. 

ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ, ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com