ಬಾಗಲಕೋಟೆ, ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
Published: 09th July 2022 09:01 AM | Last Updated: 09th July 2022 01:25 PM | A+A A-

ಸಾಂಕೇತಿಕ ಚಿತ್ರ
ಬಾಗಲಕೋಟೆ/ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಬಸವನಬಾಗೇವಾಡಿ, ವಿಜಯಪುರ ನಗರ, ಇಂಡಿ, ಬಬಲೇಶ್ವರ ಸೇರಿದಂತೆ ಇನ್ನೂ ಹಲವು ಗ್ರಾಮಗಳಲ್ಲಿ ಹಾಗೂ ಬಾಗಲಕೋಟೆಯ ಜಮಖಂಡಿ ಸಮೀಪ ಭೂಕಂಪನದ ಅನುಭವವಾಗಿದೆ.
ಇದನ್ನೂ ಓದಿ: ಕೊಡಗಿನಲ್ಲಿ ಸತತ ಕಂಪನಗಳು ಸನ್ನಿಹಿತವಾಗುತ್ತಿರುವ ವಿಪತ್ತಿನ ಸಂಕೇತವಾಗಿರಬಹುದು: ಭೂಕಂಪಶಾಸ್ತ್ರಜ್ಞರು
ಭೂಕಂಪದ ಬಗ್ಗೆ ಜಿಲ್ಲಾಡಳಿತಗಳು ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ, ಕಂಪನ ಸಂಭವಿಸಿದ ಪ್ರದೇಶಗಳಲ್ಲಿ ಎಷ್ಟು ಹಾನಿಯಾಗಿದೆ ಎಂದು ಸಹ ತಿಳಿದುಬಂದಿಲ್ಲ. ಭೂಕಂಪವಾದ ಅನುಭವವಾಗಿದೆ ಎಂದು ಹೇಳಿದ ಗ್ರಾಮಸ್ಥರ ಬಳಿ ಅಧಿಕಾರಿಗಳು ತೆರಳಿ ಮಾಹಿತಿ ಪಡೆದಿದ್ದಾರೆ.
ವಿಜಯಪುರದ ಹಲವು ಭಾಗಗಳಲ್ಲಿ ಕಳೆದ ಎರಡು ವರ್ಷಗಳಲ್ಲಿ ಕನಿಷ್ಠ 18 ಬಾರಿ ಭೂಕಂಪವಾಗಿದೆ.