ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೆ ನೀರಾವರಿ ವಿಸ್ತರಿಸುವ ಸಾಮರ್ಥ್ಯ ಹೊಂದಿದೆ: ಗೋವಿಂದ್ ಕಾರಜೋಳ

ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಕರ್ನಾಟಕವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶಕ್ಕೆ ನೀರಾವರಿ ವಿಸ್ತರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನೀರಾವರಿ ಸಚಿವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ನೆರೆಯ ತಮಿಳುನಾಡು ಆಕ್ಷೇಪಣೆಯ ಹೊರತಾಗಿಯೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.

ನೀರು ಹಂಚಿಕೆ ಮಾಡದೆ ಕರ್ನಾಟಕದ ನೀರಾವರಿ ಯೋಜನೆಗಳಿಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗೆ 1,000 ಕೋಟಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ಮತ್ತು ಎತ್ತಿನಹೊಳೆ ಯೋಜನೆಗೆ 3,000 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ಕೆಆರ್‌ಎಸ್, ಕಬಿನಿ, ಹಾರಂಗಿ ಮತ್ತು ಚಿಕ್ಕಹೊಳೆ ಅಣೆಕಟ್ಟುಗಳ ತುರ್ತು ಕ್ರಿಯಾ ಯೋಜನೆ ಅನುಷ್ಠಾನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೀರಿನ ಸಂರಕ್ಷಣೆ ಮತ್ತು ಜಲಮೂಲಗಳ ಸಂರಕ್ಷಣೆಯಲ್ಲಿ ಜನರು ಪಾಲ್ಗೋಳ್ಳಬೇಕು ಎಂದು ಹೇಳಿದರು.

ರಾಜ್ಯಾದ್ಯಂತ 231 ದೊಡ್ಡ ಮತ್ತು ಸಣ್ಣ ನೀರಾವರಿ ಅಣೆಕಟ್ಟುಗಳಿದ್ದು, ಇವುಗಳ ಮೂಲಕ 30 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಗೆ   2,810 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದನ್ನು 10 ಲಕ್ಷ ಹೆಕ್ಟೇರ್‌ಗೆ ವಿಸ್ತರಿಸಬಹುದು ಎಂದು ಕಾರಜೋಳ ಹೇಳಿದರು.

ರಾಜ್ಯವು 64 ಲಕ್ಷ ಹೆಕ್ಟೇರ್ ಕೃಷಿ ಭೂಮಿಯನ್ನು ಹೊಂದಿದೆ ಮತ್ತು ನೀರಾವರಿ ಪ್ರದೇಶದ ಹೆಚ್ಚಳವು ರೈತ ಸಮುದಾಯವನ್ನು ಸಬಲಗೊಳಿಸುತ್ತದೆ ಮತ್ತು ಆಹಾರ ಉತ್ಪಾದನೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ ಎಂದರು.

ಮೈಸೂರು ಅರಸರನ್ನ ನಾವು ಸ್ಮರಿಸಲೇ ಬೇಕು. ದೇಶದ ಅಭಿವೃದ್ಧಿಯಲ್ಲಿ ಮುಂಚೂಣೆಯಲ್ಲಿ ಇರುವವರು ನಾಲ್ವಡಿ ಕೃಷ್ಣರಾಜ ಒಡೆಯರ್, ನೀರಾವರಿ, ಶಿಕ್ಷಣ, ಔದ್ಯೋಗಿಕ ಕ್ಷೇತ್ರದ ಸಾಧನೆ ಮೈಲಿಗಲ್ಲು. ಅದನ್ನ ಉಳಿಸಿಕೊಂಡು ಹೋಗುವುದೇ ನಮ್ಮ ಸಾಮಾಜಿಕ ಹೊಣೆಗಾರಿಕೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com