ಭಾರೀ ಮಳೆ: ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್, ಆರು ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಣೆ

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 6 ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 6 ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಿಸಿದೆ.

ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನೂ ಯಾದಗಿರಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,  ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ರೆಡ್  ಆಲರ್ಟ್ ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com