ನಾಳೆ ಚಾಮರಾಜಪೇಟೆ ಬಂದ್: ಕಮಿಷನರ್ ನೇತೃತ್ವದಲ್ಲಿ ಭಾರೀ ಭದ್ರತೆ- ಆರಗ ಜ್ಞಾನೇಂದ್ರ
ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ.
Published: 11th July 2022 02:57 PM | Last Updated: 11th July 2022 04:22 PM | A+A A-

ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಗಡಿ, ಮಳಿಗೆಗಳ ಮುಂದೆ ಫೋಸ್ಟರ್ ಅಂಟಿಸಿ ಬಂದ್ ಗೆ ಬೆಂಬಲ ನೀಡುವಂತೆ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಚಾಮರಾಜ ಪೇಟೆ ಬಂದ್ ಸಂಬಂಧ ಈಗಾಗಲೇ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ. ಹೆಚ್ಚಿನ ಪೊಲೀಸರನ್ನು ನಿಯೋಜಿಸಿ, ಬಂದೋಬಸ್ತ್ ಮಾಡಲಾಗಿದೆ. ಕಮಿಷನರ್ ನೇತೃತ್ವದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಈದ್ಗಾ ಮೈದಾನ ವಿವಾದ: ಜುಲೈ 12 ಚಾಮರಾಜಪೇಟೆ ಬಂದ್! ಶಾಸಕ ಜಮೀರ್ ವಿರುದ್ಧ ಸಂಘಟನೆಗಳ ಆಕ್ರೋಶ!
ಈ ಮಧ್ಯೆ ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಳೆ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ನಮ್ಮ ಸಚಿವರು ಹೋಗ್ತಿದ್ದಾರೆ. ನಾನು ಕೂಡಾ ಆಗುಂಬೆ ಬಳಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡಿದ್ದ ಸ್ಥಳಕ್ಕೆ ಭೇಟಿ ನೀಡಿ, ಕೂಡಲೇ ದುರಸ್ತಿ ಮಾಡುವಂತೆ ಎಂಜಿನಿಯರ್ ಗಳಿಗೆ ಆದೇಶಿಸಿರುವುದಾಗಿ ತಿಳಿಸಿದರು.