ದಕ್ಷಿಣ ಕನ್ನಡ: ಕಾಣಿಯೂರಿನಲ್ಲಿ ಹೊಳೆಗೆ ಬಿದ್ದಿದ್ದ ಕಾರು; ಕೊಚ್ಚಿಹೋಗಿದ್ದ ಇಬ್ಬರು ಯುವಕರ ಶವ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ. 
ಹಳ್ಳದಲ್ಲಿ ಶವಕ್ಕಾಗಿ ಹುಡುಕಾಟ ನಡೆಸಿದ್ದ ಸಿಬ್ಬಂದಿ
ಹಳ್ಳದಲ್ಲಿ ಶವಕ್ಕಾಗಿ ಹುಡುಕಾಟ ನಡೆಸಿದ್ದ ಸಿಬ್ಬಂದಿ

ಕಡಬ (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕಾಣಿಯೂರಿನಲ್ಲಿ ಹೊಳೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ 250 ಮೀಟರ್ ದೂರದಲ್ಲಿ ಇಬ್ಬರ ಶವ ಪತ್ತೆಯಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಳೆದ ಶನಿವಾರ ತಡರಾತ್ರಿ ಇಬ್ಬರು ಯುವಕರು ವೇಗವಾಗಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಆಕಸ್ಮಿಕವಾಗಿ ಹೊಳೆಗೆ ಬಿದ್ದ ಪರಿಣಾಮ ಇಬ್ಬರು ಕೊಚ್ಚಿಕೊಂಡು ಹೋಗಿದ್ದರು. 

ಪುತ್ತೂರಿನಿಂದ ಕಾಣಿಯೂರು ಕಡೆಗೆ ಇಬ್ಬರು ಯುವಕರು ಮಾರುತಿ 800 ಕಾರಿನಲ್ಲಿ ಹೋಗುತ್ತಿದ್ದಾಗ ಮಧ್ಯರಾತ್ರಿ ವೇಳೆಗೆ ಕಾಣಿಯೂರು ಹಳ್ಳಕ್ಕೆ ಪಲ್ಟಿಯಾಗಿ ಬಿದ್ದಿತ್ತು. ಮರುದಿನ ಭಾನುವಾರ ಬೆಳಗ್ಗೆ 6 ಗಂಟೆಗೆ ಘಟನೆ ಬೆಳಕಿಗೆ ಬಂದಿದೆ. ಅದಕ್ಕೂ ಹಿಂದಿನ ದಿನ ಮಧ್ಯರಾತ್ರಿ 12:10 ಕ್ಕೆ ವೇಗವಾಗಿ ಬಂದ ಕಾರು ರೇಲಿಂಗ್‌ಗೆ ಡಿಕ್ಕಿ ಹೊಡೆದು ನಂತರ ಹೊಳೆಯಲ್ಲಿ ಬಿದ್ದಿರುವುದು ಸಮೀಪದ ಮಸೀದಿಯ ಸಿಸಿಟಿವಿ ದೃಶ್ಯಾವಳಿಯಿಂದ ತಿಳಿದುಬಂದಿದೆ. ಶೋಧ ಕಾರ್ಯ ಆರಂಭಿಸಿದ ನಂತರ ಸ್ಥಳದಿಂದ 60 ಮೀಟರ್ ದೂರದಲ್ಲಿ ಕಾರು ಪತ್ತೆಯಾಗಿದೆ.ಯುವಕರು ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಧನುಷ್ (26) ಮತ್ತು ಮಂಜೇಶ್ವರ ನಿವಾಸಿ ಧನುಷ್ (21) ಆಗಿದ್ದಾರೆ.

ಅಗ್ನಿಶಾಮಕದಳ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ, ಸ್ಥಳೀಯ ಪೊಲೀಸರು ಸತತ ಹುಡುಕಾಟ ನಡೆಸಿದ ನಂತರ ಇಂದು ಬೆಳಗ್ಗೆ ಇಬ್ಬರ ಶವ ಪತ್ತೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com