ವಿವಿಧ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದುಗೊಳಿಸಿ ಮುಖ್ಯಮಂತ್ರಿ ಬೊಮ್ಮಾಯಿ ಆದೇಶ

ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ
ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೇಮಕವಾಗಿದ್ದ ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಜೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆ ಶೃತಿ ಸೇರಿದಂತೆ 46 ನಿಗಮ, ಮಂಡಳಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರದ್ದುಪಡಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com