ಬೆಂಗಳೂರು: ಅಲೆಮಾರಿಗಳ ಗ್ಯಾಂಗ್ ಪತ್ತೆ; 4 ಕೋಟಿ ರೂ. ಮೌಲ್ಯದ ಗಾಂಜಾ ವಶ!

ಅಲೆಮಾರಿಗಳ ಸೋಗಿನಲ್ಲಿ ಆಶಿಶ್ ಆಯಿಲ್ ಹಾಗೂ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ತಂಡವನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು 4 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಸಿಬಿ ಪೊಲೀಸರು
ಸಿಸಿಬಿ ಪೊಲೀಸರು

ಬೆಂಗಳೂರು: ಅಲೆಮಾರಿಗಳ ಸೋಗಿನಲ್ಲಿ ಆಶಿಶ್ ಆಯಿಲ್ ಹಾಗೂ ಗಾಂಜಾ ಕಳ್ಳ ಸಾಗಾಣೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ತಂಡವನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು 4 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ವಿಶಾಖಪಟ್ಟಣದ 34 ವರ್ಷದ ಸತ್ಯವತಿ, 35 ವರ್ಷದ ಮಲ್ಲೇಶ್ವರಿ, 44 ವರ್ಷದ ಶ್ರೀನಿವಾಸ್ ಹಾಗೂ 33 ವರ್ಷದ ಪ್ರಹ್ಲಾದ್ ಎಂಬುವರನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣಗುಪ್ತ ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ 4 ಕೋಟಿ ರೂ. ಮೌಲ್ಯದ 5 ಕೆಜಿ ಆಶಿಶ್‌ಆಯಿಲ್, 6 ಕೆಜಿ ಗಾಂಜಾ ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದರು. 

ಕಳೆದ ಜೂನ್ 23ರಂದು ವಿವೇಕ ನಗರದಲ್ಲಿ ಡ್ರಗ್ಸ್ ಮಾರಾಟದ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡು ನೀಲಸಂದ್ರದ 38 ವರ್ಷದ ಡಿಜೆ ಜೂರ್‌ಹ್ಯಾರಿಸ್ ಎಂಬಾತನನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ, ಗಾಂಜಾ, ಎಸ್‌ಎಲ್‌ಡಿ ಸ್ಟ್ರಿಪ್‌ಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಆರೋಪಿ ಜೂರ್‌ಹ್ಯಾರಿಸ್ ವಿಚಾರಣೆಯಲ್ಲಿ ಬಾಯ್ಬಿಟ್ಟ ಮಾಹಿತಿಯಾಧರಿಸಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಅಧಿಕಾರಿಗಳು ನಾಲ್ವರ ಗ್ಯಾಂಗ್‌ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com