ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1124 ಸೇರಿ ರಾಜ್ಯದಲ್ಲಿ 1231 ಮಂದಿಗೆ ಪಾಸಿಟಿವ್; ಸಾವು ಶೂನ್ಯ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1231 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,81,816ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1231 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,81,816ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40083 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1124 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,15,473ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1047 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,35,088ಕ್ಕೆ ಏರಿಕೆಯಾಗಿದೆ. ಇನ್ನು 6603 ಸಕ್ರಿಯ ಪ್ರಕರಣಗಳಿವೆ.

Related Stories

No stories found.

Advertisement

X
Kannada Prabha
www.kannadaprabha.com