ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಬಿಬಿಎಂಪಿ ಅಸ್ತು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ.
Published: 14th July 2022 03:50 PM | Last Updated: 14th July 2022 05:01 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ.
ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್‌ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತರು ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ ಯೋಜನೆಗೆ ಟೆಂಡರ್ ಕರೆಯಲಾಗುವುದು ಎಂದು ಪಾಲಿಕೆ ವಿಶೇಷ ಆಯುಕ್ತ ರಾಮಪ್ರಸಾತ್ ಮನೋಹರ್ ಅವರು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
“ಆರಂಭದಲ್ಲಿ ನಾವು 5,000 ಲ್ಯಾಪ್‌ಟಾಪ್‌ಗಳನ್ನು ವಿತರಿಸುತ್ತೇವೆ. ನಂತರ, ಹೆಚ್ಚಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ: ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ 1.80 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ!
ಬಿಬಿಎಂಪಿ ನಗರದಲ್ಲಿ 15 ಪಿಯು ಕಾಲೇಜ್ ಗಳು ಮತ್ತು ನಾಲ್ಕು ಪದವಿ ಕಾಲೇಜುಗಳನ್ನು ಹೊಂದಿದ್ದು, ಕ್ರಮವಾಗಿ 4,398 ಮತ್ತು 1,104 ವಿದ್ಯಾರ್ಥಿಗಳನ್ನು ಹೊಂದಿದೆ. ಪಾಲಿಕೆಯು 71 ವಿದ್ಯಾರ್ಥಿಗಳೊಂದಿಗೆ ಎರಡು ಸ್ನಾತಕೋತ್ತರ ಕಾಲೇಜುಗಳನ್ನು ಹೊಂದಿದೆ. SC/ST, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.