ಬೆಂಗಳೂರು: 25 ಬೈಕ್‌ಗಳನ್ನು ಕದ್ದಿದ್ದ ಸೆಕ್ಯೂರಿಟಿ ಗಾರ್ಡ್ ಅಂದರ್

25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಭದ್ರತಾ ಸಿಬ್ಬಂದಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಭದ್ರತಾ ಸಿಬ್ಬಂದಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಲಗ್ಗೆರೆಯ ಕೆಂಪೇಗೌಡ ಲೇಔಟ್ ನಿವಾಸಿ ಶ್ರೀನಿವಾಸ್ (39) ಬಂಧಿತ ಆರೋಪಿ. ಬೆಳಗ್ಗೆ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು,ರಾತ್ರಿ ವೇಳೆ ಡುಪ್ಲಿಕೇಟ್ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ.

ಜೂನ್ 22 ರಂದು ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಬೈಕ್ ಕಳೆದುಕೊಂಡ ವ್ಯಕ್ತಿಯೊಬ್ಬರು ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ ನಂತರ ಶ್ರೀನಿವಾಸ್ ನನ್ನು ಬಂಧಿಸಲಾಗಿದೆ. ದುಶ್ಚಟಗಳಿಗೆ ದಾಸನಾಗಿದ್ದ ಆತನಿಗೆ ಬರುತ್ತಿದ್ದ ಸಂಬಳ ಸಾಕಾಗುತ್ತಿರಲಿಲ್ಲ, ಹೀಗಾಗಿ ಕಳ್ಳತನ ಮಾಡುತ್ತಿದ್ದಾಗಿ ಹೇಳಿದ್ದಾನೆ.

ಕದ್ದ ಬೈಕ್ ಗಳನ್ನು ತಾನು ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ ವ್ಯಾಪಾರಿ ಎಂದು ಹೇಳಿಕೊಂಡು ಕೋಲಾರ ಮತ್ತು ಆಂಧ್ರಪ್ರದೇಶದ ಸ್ನೇಹಿತರಿಗೆ ಮಾರಾಟ ಮಾಡುತ್ತಿದ್ದ. ಹಣ ವಸೂಲಿ ಮಾಡಿದ ನಂತರ ವಾಹನದ ದಾಖಲೆಗಳನ್ನು ನೀಡುತ್ತಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com