ಬೆಂಗಳೂರು: ಜಿಗಣಿಯಲ್ಲಿ ಕೇರಳ ಮೂಲದ ವ್ಯಕ್ತಿಯ ಬರ್ಬರ ಹತ್ಯೆ; ಕೊಲೆಗೆ ಕಾರಣ ಇನ್ನೂ ನಿಗೂಢ!

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ವ್ಯಕ್ತಿಯೊಬ್ಬನನ್ನು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಗಣಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಸಾನು ಥಾಂಪ್ಸನ್
ಸಾನು ಥಾಂಪ್ಸನ್

ಬೆಂಗಳೂರು:  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 31 ವರ್ಷದ ವ್ಯಕ್ತಿಯೊಬ್ಬನನ್ನು ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಗಣಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇರಳದ ಕಾಸರಗೋಡಿನ ರಾಜಪುರಂನ ಸಾನು ಥಾಂಪ್ಸನ್ ಅವರು ರಾತ್ರಿ 10.30 ರ ಸುಮಾರಿಗೆ ಪೇಯಿಂಗ್ ಗೆಸ್ಟ್ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಅಪರಿಚಿತ ವ್ಯಕ್ತಿಗಳು ಅವರ ಮೇಲೆ ದಾಳಿ ಮಾಡಿದ್ದಾರೆ. 

ಸಾನು ಥಾಂಪ್ಸನ್ ತಮ್ಮ ಕಚೇರಿಯ ಗೇಟ್‌ನಿಂದ ಸುಮಾರು 100 ಮೀಟರ್ ದೂರದಲ್ಲಿ ನಡೆದುಕೊಂಡಿದ್ದರು, ಆಗ ಮೂವರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಾಂಪ್ಸನ್ ಕಳೆದ 10 ವರ್ಷಗಳಿಂದ ಕಂಪನಿಯಲ್ಲಿ ಸಹಾಯಕ ಇಂಜಿನಿಯರ್‌ನಲ್ಲಿ ಕೆಲಸ ಮಾಡುತ್ತಿದ್ದರು.  ಆರೋಪಿಗಳು ಥಾಂಪ್ಸನ್ ಅವರ ಎದೆಗೆ ಇರಿದ ತಕ್ಷಣವೇ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಇಡೀ ಘಟನೆಯು 10 ಸೆಕೆಂಡುಗಳಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ದರೋಡೆಗೆ ಪ್ರಯತ್ನಿಸಲಿಲ್ಲ, ಅವರ ಮೊಬೈಲ್ ಫೋನ್, ವ್ಯಾಲೆಟ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಹಾಗೆಯೇ ಇವೆ.  ಆದರೂ  ನಾವು ಈ ಹಂತದಲ್ಲಿ ಯಾವುದೇ ತೀರ್ಮಾನಕ್ಕೆ ಬರಲಾಗುವುದಿಲ್ಲ, ಎಲ್ಲಾ ಕೋನಗಳಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಥಾಂಪ್ಸನ್ ಅವರ ಕುಟುಂಬ ಸದಸ್ಯರು ಶುಕ್ರವಾರ ಮರಣೋತ್ತರ ಪರೀಕ್ಷೆಯ ನಂತರ ಶವ ಕೊಂಡೊಯ್ದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಜಿಗಣಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com