ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
Published: 16th July 2022 09:51 AM | Last Updated: 16th July 2022 01:50 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು
ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆದೇಶ ಹೊರಡಿಸಿದ್ದು ನನ್ನ ಗಮನಕ್ಕೆ ಬಂದಿರಲಿಲ್ಲ. ಸರ್ಕಾರಿ ನೌಕರರು ಬಹಳ ದಿನಗಳಿಂದ ಕಚೇರಿಗಳಲ್ಲಿ ಫೋಟೋ-ವಿಡಿಯೊ ತೆಗೆಯುವುದಕ್ಕೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸುತ್ತಿದ್ದರು. ನೌಕರರು ಹೇಳುವುದರಲ್ಲಿಯೂ ಅರ್ಥವಿದೆ. ಕೆಲವು ಹೆಣ್ಣುಮಕ್ಕಳಿಗೆ ಫೋಟೋ, ವಿಡಿಯೊ ತೆಗೆದು ತೊಂದರೆಯಾಗಿತ್ತು ಎಂದರು.
ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊಗೆ ನಿರ್ಬಂಧ: ಆದೇಶ ಹೊರಡಿಸಿದ ದಿನವೇ ಹಿಂಪಡೆದು ನಗೆಪಾಟಲಿಗೀಡಾದ ಸರ್ಕಾರ!
ಸರ್ಕಾರ ಪಾರದರ್ಶಕವಾಗಿದೆ: ಯಾರು ಏನೇ ಹೇಳಿದರೂ, ಟೀಕೆ ಮಾಡಿದರೂ ಸರ್ಕಾರ, ಇಲಾಖೆಗಳ ಕೆಲಸ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವ ಪ್ರಶ್ನೆಯಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ನಿರ್ಬಂಧ ಹಾಕಬಾರದು, ಮೊದಲು ಯಾವ ರೀತಿಯಿದ್ದು ಅದೇ ರೀತಿ ಮುಂದುವರಿದುಕೊಂಡು ಹೋಗಬೇಕು ಎಂದು ತಾತ್ವಿಕ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.