ಮಳೆಯಿಂದ ಬೆಳೆ ನಷ್ಟಕ್ಕೆ ನೀಡುವ ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ

ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ನೀಡುವ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಮಳೆಯಾಶ್ರಿತ ಪ್ರದೇಶದ ಬೆಳೆಗಳಿಗೆ...
ಬೆಳೆ ಹಾನಿಯ ಸಾಂದರ್ಭಿಕ ಚಿತ್ರ
ಬೆಳೆ ಹಾನಿಯ ಸಾಂದರ್ಭಿಕ ಚಿತ್ರ

ಬೆಂಗಳೂರು: ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ನೀಡುವ ಪರಿಹಾರದ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಮಳೆಯಾಶ್ರಿತ ಪ್ರದೇಶದ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 6,800 ರೂ.ನಿಂದ 13,600 ರೂ.ಗೆ, ನೀರಾವರಿ ಬೆಳೆಗಳಿಗೆ 13,500 ರೂ.ನಿಂದ 25,000 ರೂ.ಗೆ, ಬಹುವಾರ್ಷಿಕ ಬೆಳೆಗಳಿಗೆ 18,000 ರೂ.ನಿಂದ 28,000 ರೂ.ಗೆ ಹೆಚ್ಚಿಸಲಾಗಿದೆ.

ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿಯ ನಿಯಮಗಳ ಪ್ರಕಾರ ರಾಜ್ಯ ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಿದ್ದು, ಮಳೆಯಾಶ್ರಿತ ಬೆಳೆಗೆ 6,800 ರೂ., ನೀರಾವರಿಗೆ 13,500 ರೂ. ಮತ್ತು ಬಹು ವರ್ಷದ ಬೆಳೆಗಳಿಗೆ ಹೆಕ್ಟೇರ್‌ಗೆ 18,000 ರೂ. ನೀಡಲಿದೆ. 

ಶುಕ್ರವಾರದ ಆದೇಶದಂತೆ ಜೂನ್ 1ರಿಂದ ಡಿಸೆಂಬರ್ 31ರವರೆಗೆ ಮಳೆ ಮತ್ತು ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಗರಿಷ್ಠ ಎರಡು ಹೆಕ್ಟೇರ್‌ಗೆ ಪರಿಹಾರ ನೀಡಲಾಗುವುದು. ಬೆಳೆ ನಷ್ಟದ ಕುರಿತು ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com