ಅಥಣಿ: ಶಾಲೆಯ ಮೇಲ್ಛಾವಣಿ ಬೀಳುವ ಕ್ಷಣ ಮೊದಲು ಮಕ್ಕಳ ಸ್ಥಳಾಂತರ; 80 ವಿದ್ಯಾರ್ಥಿಗಳು ಅಪಾಯದಿಂದ ಪಾರು!

ಮಳೆಗೆ ನೆನೆದಿದ್ದ ಶಾಲಾ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಬೇರೆಡೆ ಕರೆದುಕೊಂಡು ಹೋದ ಕೆಲವೇ ನಿಮಿಷಗಳಲ್ಲಿ ಚಾವಣಿ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಥಣಿ: ಮಳೆಗೆ ನೆನೆದಿದ್ದ ಶಾಲಾ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಬೇರೆಡೆ ಕರೆದುಕೊಂಡು ಹೋದ ಕೆಲವೇ ನಿಮಿಷಗಳಲ್ಲಿ ಚಾವಣಿ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಾರ್ಥಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದಿದೆ.

ಶಿಕ್ಷಕರ ಸಮಯ ಪ್ರಜ್ಞೆಯಿಂದ ಘಟಿಸಬಹುದಾಗಿದ್ದ ಅನಾಹುತ ತಪ್ಪಿದಂತಾಗಿದ್ದು, ಅದೃಷ್ಟವಶಾತ್‌ ಯಾರಿಗೂ ಪ್ರಾಣಾಪಾಯವಾಗಿಲ್ಲ. ಅಥಣಿ ತಾಲೂಕಿನ ಪಾರ್ಥಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ  80 ವಿದ್ಯಾರ್ಥಿಗಳು ಓದುತ್ತಿರುವ ಕೋಣೆಯಲ್ಲಿ ಚಾವಣಿಯ ಪದರು ಕಳಚುತ್ತಿರುವುದನ್ನು ಕಂಡು ಆ ತರಗತಿಯ ಶಿಕ್ಷಕರು ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿದ್ದಾರೆ.

ಆಗ ಮುಖ್ಯ ಶಿಕ್ಷಕ ಎಸ್‌.ಎಂ.ರಾಠೋಡ ಅವರು ಮಕ್ಕಳ ಮೇಲೆ ಬೀಳುವ ಸ್ಥಿತಿಯನ್ನು ಅರಿತು ತಕ್ಷಣವೇ ಎಲ್ಲ ಮಕ್ಕಳನ್ನು ಬೇರೊಂದು ಕ್ಲಾಸ್‌ರೂಮ್‌ಗೆ ಸ್ಥಳಾಂತರಿಸಿ ಅಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಿದರು. ಮಕ್ಕಳನ್ನು ಈ ಕೋಣೆಯಿಂದ ಸ್ಥಳಾಂತರಿಸಿದ ಕೆಲವ್ ಕ್ಷಣಗಳಲ್ಲಿ ಕೋಣೆಯ ಚಾವಣಿ ಪದರು ಕುಸಿದುಬಿದ್ದಿದೆ.

ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ಬಸವರಾಜ ತಳವಾರ ಶಾಲೆಗೆ ಭೇಟಿ ನೀಡಿದ್ದು, ಶಾಲೆಯ ಇನ್ನೊಂದು ತರಗತಿ ಕೊಠಡಿ ಸೋರಿಕೆಯಾಗಿರುವುದು ಕಂಡು ಬಂದಿದೆ. ಅಥಣಿ ತಾಲೂಕಿನಾದ್ಯಂತ ಸುಮಾರು 200 ಸರಕಾರಿ ಶಾಲೆಗಳ ತರಗತಿ ಕೊಠಡಿಗಳು ಹಾಳಾಗಿವೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ವರದಿ ಕಳುಹಿಸಿದ್ದು, ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಳವಾರ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com