ಗೌರವ ಡಾಕ್ಟರೇಟ್ ಗೆ ರಾಣಿ ಚೆನ್ನಮ್ಮ ವಿವಿಯಿಂದ ಅರ್ಜಿ ಆಹ್ವಾನ, ವಿವಾದಕ್ಕೆ ಎಡೆ!

10ನೇ ಘಟಿಕೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಅರ್ಜಿಗಳನ್ನು ಆಹ್ವಾನಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: 10ನೇ ಘಟಿಕೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಅರ್ಜಿಗಳನ್ನು ಆಹ್ವಾನಿಸಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳಿಂದ ರಚಿಸಲಾದ ಸಮಿತಿಗಳ ಶಿಫಾರಸ್ಸು ಆಧರಿಸಿ ಕುಲಪತಿ ಮತ್ತು ರಾಜ್ಯಪಾಲರ ಸೂಚನೆ ಮೇರೆಗೆ ವಿವಿಧ ಕ್ಷೇತ್ರಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ. 

ಗೌರವ ಡಾಕ್ಟರೇಟ್ ಪದವಿಗೆ ಸಾಧಕರನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸುವುದು ಸೂಕ್ತವಲ್ಲ ಎಂದು ಅನೇಕ ಶಿಕ್ಷಣ ತಜ್ಞರು, ಮುಖಂಡರು ಅಭಿಪ್ರಾಯಪಡುತ್ತಿದ್ದರೂ ರಾಣಿ ಚೆನ್ನಮ್ಮ ವಿವಿ ಕುಲಪತಿ ಎಂ. ರಾಮಚಂದ್ರ ಗೌಡ ಅದನ್ನು ಸಮರ್ಥಿಸಿಕೊಂಡಿದ್ದಾರೆ.  ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ಸಲ್ಲಿಸಿರುವ ಅರ್ಹ ಗಣ್ಯರನ್ನು ಗುರುತಿಸಿ, ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ಸಂಭಾವ್ಯ ಪಟ್ಟಿಯನ್ನು ತಜ್ಞರ ಸಮಿತಿ ಸಲ್ಲಿಸಿದ ನಂತರ ರಾಜ್ಯಪಾಲರು ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪ್ರೊಫೆಸರ್ ರಾಮಚಂದ್ರಗೌಡ ತಿಳಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com