ಸರ್ಕಾರಿ ಕಾಲೇಜುಗಳ ಕ್ಯಾಂಪಸ್ ಅಭಿವೃದ್ಧಿಗೆ ಶುಲ್ಕ ಬಳಸಬಹುದು: ರಾಜ್ಯ ಸರ್ಕಾರ
ಸರ್ಕಾರಿ ಕಾಲೇಜುಗಳಿಗೆ ಹೆಚ್ಚಿನ ಆರ್ಥಿಕ ಸ್ವಾತಂತ್ರ್ಯನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರಿ ಕಾಲೇಜುಗಳ ಕ್ಯಾಂಪಸ್ ಅಭಿವೃದ್ಧಿಗೆ ಶುಲ್ಕ ಬಳಸಬಹುದು ಎಂದು ಹೇಳಿದೆ.
Published: 18th July 2022 01:55 PM | Last Updated: 18th July 2022 03:03 PM | A+A A-

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್
ಬೆಂಗಳೂರು: ಸರ್ಕಾರಿ ಕಾಲೇಜುಗಳಿಗೆ ಹೆಚ್ಚಿನ ಆರ್ಥಿಕ ಸ್ವಾತಂತ್ರ್ಯನೀಡಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರಿ ಕಾಲೇಜುಗಳ ಕ್ಯಾಂಪಸ್ ಅಭಿವೃದ್ಧಿಗೆ ಶುಲ್ಕ ಬಳಸಬಹುದು ಎಂದು ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು, ಸರ್ಕಾರಿ, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಶುಲ್ಕವನ್ನು ಅಭಿವೃದ್ಧಿಪಡಿಸುವ ಕಾಲೇಜುಗಳಿಗೆ ಖರ್ಚು ಮಾಡಲು ಅನುಮತಿ ನೀಡಲಾಗೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಭಾನುವಾರ ಪ್ರಕಟಣೆ ಹೊರಡಿಸಿರುವ ಅವರು, 'ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸ್ವಾಯತ್ತತೆ ನೀಡುವುದು ಸರ್ಕಾರದ ಆಶಯವಾಗಿದ್ದು, ಈ ಮೂಲಕ ಸಂಪನ್ಮೂಲ ಕ್ರೋಡೀಕರಣಕ್ಕೆ ಅವಕಾಶ ನೀಡಬೇಕು. ಹೀಗಾಗಿ ಸರ್ಕಾರಿ ಶುಲ್ಕ ಬಳಕೆಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಈ ಶೈಕ್ಷಣಿಕ ವರ್ಷದಿಂದಲೇ ಈ ಆದೇಶ ಜಾರಿಯಾಗಲಿದ್ದು, ಕಾಲೇಜುಗಳಿಗೆ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!
ಮಾರ್ಗಸೂಚಿಗಳ ಪ್ರಕಾರ, ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಯು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರು, ಹಿರಿಯ ಉಪನ್ಯಾಸಕರು, ಅಧೀಕ್ಷಕರು ಮತ್ತು ಅಂತಿಮ ವರ್ಷದ ಇಬ್ಬರು ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ.
ಈ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವರು, 'ಈ ಸಮಿತಿಗಳನ್ನು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಜೂನ್‌ನೊಳಗೆ ರಚಿಸಬೇಕು ಮತ್ತು ವಾರ್ಷಿಕ ಅಭಿವೃದ್ಧಿ ಮತ್ತು ಕ್ರಿಯಾ ಯೋಜನೆಯನ್ನು ಆಗಸ್ಟ್‌ನೊಳಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಆಯುಕ್ತರಿಗೆ ಅನುಮೋದನೆಗಾಗಿ ಸಲ್ಲಿಸಬೇಕು.
ನಿರ್ವಹಣೆ ಮತ್ತು ಅಭಿವೃದ್ಧಿ ಕಾರ್ಯಗಳು, ಗ್ರಂಥಾಲಯಗಳಿಗೆ ಪುಸ್ತಕಗಳ ಖರೀದಿ, ಪ್ರಯೋಗಾಲಯಗಳು ಮತ್ತು ಕಚೇರಿಗಳಿಗೆ ಉಪಕರಣಗಳು ಮತ್ತು ಇತರ ಬಳಕೆಗಳ ಮೇಲೆ ಕೇಂದ್ರೀಕರಿಸಲು ಈ ಕಾಲೇಜುಗಳು ಸಂಗ್ರಹಿಸುವ ಬಹುತೇಕ ಎಲ್ಲಾ ಶುಲ್ಕಗಳ ಒಂದು ಭಾಗವನ್ನು ಅವರಿಗೆ ಹಿಂತಿರುಗಿಸಲಾಗುತ್ತದೆ. ಹಣದ ವಹಿವಾಟು ಆನ್‌ಲೈನ್‌ನಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.