ಕರ್ನಾಟಕ ಜನತೆಗೆ ಮತ್ತೆ ಶಾಕ್: ನಂದಿನಿ ಉತ್ಪನ್ನಗಳ ಬೆಲೆ ಏರಿಕೆ; ಹಾಲಿನ ರೇಟ್ ಹೆಚ್ಚಿಸಲು ಪ್ಲಾನ್!
ಬೆಂಗಳೂರು: ಮೊದಲೇ ಬೆಲೆ ಏರಿಕೆ ಜಿಎಸ್‍ಟಿ ಏರಿಕೆಯಿಂದ ತತ್ತರಿಸಿರುವ ಕರ್ನಾಟಕದ ಜನತೆಗೆ ಹೊಸ ಶಾಕ್ ಎದುರಾಗಿದೆ. ಕೇಂದ್ರದ ನೂತನ ಜಿಎಸ್ ಟಿ ನೀತಿ ಜಾರಿ ಹಿನ್ನೆಲೆ ನಂದಿನಿ ಉತ್ಪನ್ನಗಳನ್ನು ಏರಿಕೆ ಮಾಡಲಾಗಿದ್ದು, ಜು.18 ರಿಂದ ಹೊಸ ದರಗಳು ಜಾರಿಗೆ ಬರಲಿವೆ.
ನಂದಿನಿ ಉತ್ಪನ್ನಗಳು ಜನಸಾಮಾನ್ಯರ ಜೇಬು ಸುಡಲು ಆರಂಭಿಸಲಿದೆ. ಕೆಎಂಎಫ್ ನಿಂದ ಪರಿಷ್ಕೃತ ದರ ಪಟ್ಟಿ ಬಿಡುಗಡೆ ಮಾಡಿದೆ. ಹಾಲು ಹೊರತಾಗಿ ಇತರೆ ಉತ್ಪನ್ನಗಳ ದರದಲ್ಲಿ ಹೆಚ್ಚಳ ಆಗಿದೆ. ಒಂದು ಲೀಟರ್ ಮೊಸರಿಗೆ 3 ರೂಪಾಯಿ ಹೆಚ್ಚಳ, ಮಜ್ಜಿಗೆ 200 ಎಂಎಲ್ ಗೆ 1 ರೂಪಾಯಿ ಹೆಚ್ಚಳ ಹಾಗೂ ಲಸ್ಸಿ 200 ಎಂಎಲ್ ಗೆ 1 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸದ್ಯಕ್ಕೆ ನ ವಸ್ತುಗಳ ಮೇಲೆ ಹಳೆಯ ದರವೇ ಮುದ್ರಣವಾಗಿರಲಿದೆ.
10 ರೂಪಾಯಿಯಿಂದ 200 ಎಂಎಲ್ ನಂದಿನಿ ಮೊಸರಿನ ಬೆಲೆ 12 ರೂ.ಗೆ ಏರಿಸಲಾಗಿದೆ. 2 ರೂಪಾಯಿಗಳನ್ನು ಹೆಚ್ಚಿ ಮಾಡಲಾಗಿದೆ.22 ರೂಪಾಯಿಯಿದ್ದ ಅರ್ಧ ಲೀಟರ್ ಮೊಸಲಿನ ಪ್ಯಾಕೇಸ್ ಈಗ 24 ರೂ. ಆಗಿದೆ. 1 ಲೀಟರ್ ಮೊಸರು ಪ್ಯಾಕೇಟ್ 3 ರೂ. ಏರಿಕೆಯೊಂದಿಗೆ 46 ರೂ. ಆಗಿದೆ. ಇನ್ನು 200 ಎಂಎಲ್ ಮಜ್ಜಿಗೆ ಸ್ಯಾಚೆ 7 ರಿಂದ 8 ರೂ. ಆಗಿದೆ.
ಟೆಟ್ರಾ ಪ್ಯಾಕ್ 10 ರಿಂದ 11 ರೂ. ಹಾಗೂ ಪೆಟ್ ಬಾಟಲ್ ಬೆಲೆ 12 ರಿಂದ 13 ರೂ. ಆಗಿದೆ. ಇನ್ನು 200 ಎಂಎಲ್ ನಂದಿನಿ ಲಸ್ಸಿ ಮೇಲೆ 1 ರೂಪಾಯಿ ಏರಿಸಿ ಹೊಸ ದರಗಳ ಪಟ್ಟಿಯನ್ನು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹೊರಡಿಸಿದೆ.
MF ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ನಾವು ಲೀಟರ್ ನಂದಿನಿ ಹಾಲನ್ನು 37 ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಕರ್ನಾಟಕದ ಎಲ್ಲಾ ಹಾಲು ಒಕ್ಕೂಟಗಳು ಬೆಲೆಯಲ್ಲಿ ಪರಿಷ್ಕರಣೆಗಾಗಿ ಸರ್ವಾನುಮತದಿಂದ ಕೋರಿವೆ; ಆದ್ದರಿಂದ ನಾವು ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದೇವೆ. ನಾವು ಶೀಘ್ರದಲ್ಲೇ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಪರಿಷ್ಕೃತ ದರಕ್ಕೆ ಅನುಮೋದನೆ ಪಡೆಯುತ್ತೇವೆ ಎಂದು ಹೇಳಿದರು.
ಜೂನ್ ತಿಂಗಳಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್‍ಟಿ ಮಂಡಳಿಯ 47ನೇ ಸಭೆಯು ಹಾಲಿನ ಉತ್ಪನ್ನಗಳು ಹಾಗೂ ಆಹಾರ ಧಾನ್ಯಗಳಿಗೆ ನೀಡಿದ್ದ ವಿನಾಯಿತಿ ತೆಗೆದುಹಾಕಲು ನಿರ್ಣಯ ತೆಗೆದುಕೊಂಡಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ