ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾರೂ ಮೃತಪಟ್ಟಿಲ್ಲ. ಇನ್ನು ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 1013 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,21,451ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 1214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,40,831ಕ್ಕೆ ಏರಿಕೆಯಾಗಿದೆ. ಇನ್ನು 7,617 ಸಕ್ರಿಯ ಪ್ರಕರಣಗಳಿವೆ.
Advertisement