ಈ ಬಾರಿ ನಾಡ ಹಬ್ಬ ದಸರಾ ಅದ್ದೂರಿಯಾಗಿ ಆಚರಿಸಲು ನಿರ್ಧಾರ: ಸಿಎಂ ಬೊಮ್ಮಾಯಿ 

ಕೋವಿಡ್ ಕಾರಣಕ್ಕಾಗಿ ಕಳೆದ ಬಾರಿ ನಾಡ ಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಮೈಸೂರು ದಸರಾ ಅದ್ದೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಕಾರಣಕ್ಕಾಗಿ ಕಳೆದ ಬಾರಿ ನಾಡ ಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಮೈಸೂರು ದಸರಾ ಅದ್ದೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಮೈಸೂರು ದಸರಾ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಹಬ್ಬದ ಉದ್ಘಾಟನೆ ಹಾಗೂ ಉದ್ಘಾಟಕರಾಗಿ ಯಾರನ್ನು ಆಹ್ವಾನ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಸರಾ ಬಗ್ಗೆ ಪ್ರಚಾರ ಮಾಡಲಾಗುವುದು. ದಸರಾ ಬ್ರ್ಯಾಂಡ್ ಆಗಬೇಕು ಎಂದರು.

ಸೆಪ್ಟೆಂಬರ್ 26 ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ವಸ್ತು ಪ್ರದರ್ಶನ 15 ದಿನ ಮೊದಲೇ ಆರಂಭಿಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಈ ಸಭೆಯಲ್ಲಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಜಿಟಿ ದೇವೇಗೌಡ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ತನ್ವೀರ್ ಸೇಠ್, ಸಾರಾ ಮಹೇಶ್, ಹರ್ಷವರ್ಧನ್,ರಾಮ್ ದಾಸ್, ಪರಿಷತ್ ಸದಸ್ಯ ವಿಶ್ವನಾಥ್, ಸೇರಿದಂತೆ ಮೈಸೂರು, ಮಂಡ್ಯ ಭಾಗದ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com