ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಜೆಎಸ್ ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್  ಸಂಸ್ಥೆಯಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕೆ. ಶಿವಾನಿ
ಕೆ. ಶಿವಾನಿ

ಬೆಂಗಳೂರು: ಜೆಎಸ್ ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್  ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬುಧವಾರ ಮಧ್ಯಾಹ್ನ 1.40ರ ಸುಮಾರಿಗೆ ವಿದ್ಯಾರ್ಥಿನಿ ಕೆ ಶಿವಾನಿ(21) ಪರೀಕ್ಷೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಾಲೇಜು ಹಾಸ್ಟೆಲ್ ವಾರ್ಡನ್ ಮತ್ತು ಬೋಧಕರು ವಸತಿ ನಿಲಯಕ್ಕೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ರೂಮಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ಎಷ್ಟೇ ಕರೆದರೂ ಯಾವುದೇ ಪ್ರತಿಕ್ರಿಯೆ ಬಾರಲಿಲ್ಲ. ವೆಂಟಿಲೇಟರ್ ಮೂಲಕ ಪರೀಕ್ಷಿಸುವಂತೆ ಹೆಲ್ಪರ್ ಗೆ ವಾರ್ಡನ್ ಸೂಚಿಸಿದರು. ಈ ವೇಳೆ ಆಕೆ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಹಾಸ್ಟೆಲ್ ವಾರ್ಡನ್ ಎನ್.ಕಾವ್ಯಾ ಕಾಲೇಜು ಪ್ರಿನ್ಸಿಪಾಲ್ ಡಾ.ಭೀಮಸೇನ್ ಸೊರಗಾಂವ ಅವರಿಗೆ ಮಾಹಿತಿ ನೀಡಿದ್ದಾರೆ.

ಶಿವಾನಿ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ (ಇಸಿಇ) ಓದುತ್ತಿದ್ದು, ಕೆಂಗೇರಿಯ ಡಾ.ವಿಷ್ಣುವರ್ಧನ್ ರಸ್ತೆಯಲ್ಲಿರುವ ಕಾಲೇಜು ಕ್ಯಾಂಪಸ್‌ಗೆ ಹೊಂದಿಕೊಂಡಿರುವ ಕಾಲೇಜು ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು.

ಬೀದರ್‌ನ ಹಳ್ಳಿಯೊಂದರಲ್ಲಿ ವಾಸವಾಗಿರುವ ಶಿವಾನಿಯ ಪೋಷಕರಿಗೆ ದುರಂತದ ಬಗ್ಗೆ ಮಾಹಿತಿ ನೀಡಲಾಗಿದೆ. ತಂದೆ ಕಾಶಿನಾಥ ಹಡಪದ ಸರ್ಕಾರಿ ಶಿಕ್ಷಕ, ತಾಯಿ ಗೃಹಿಣಿ. ಶಿವಾನಿ ಅಧ್ಯಯನದಲ್ಲಿ ಸರಾಸರಿಯಾಗಿದ್ದಳು ಆಕೆ ಒಂಬತ್ತು ವಿಷಯಗಳ ಬ್ಯಾಕ್‌ಲಾಗ್ ಹೊಂದಿದ್ದರು. ಬುಧವಾರ ಆಕೆ ಪರೀಕ್ಷೆಗೆ ಹಾಜರಾಗಿರಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಆಕೆ ಡೆತ್ ನೋಟ್ ಬರೆದಿದ್ದಾಳೆಯೇ ಎಂಬ ಬಗ್ಗೆ ತಿಳಿದಿಲ್ಲ ಎಂದು ಪ್ರಿನ್ಸಿಪಾಲ್ ಡಾ ಸೊರಗಾಂವ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಮೃತದೇಹವನ್ನು ಬೆಂಗಳೂರು-ಮೈಸೂರು ರಸ್ತೆಯಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com