ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ: ಇಂದು ಮಧ್ಯಾಹ್ನ ವೆಬ್ ಸೈಟ್ ನಲ್ಲಿ ಲಭ್ಯ: ಈ ಲಿಂಕ್ ನಲ್ಲಿ ವೀಕ್ಷಿಸಿ

ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಪೂರಕ ಪರೀಕ್ಷೆಯಲ್ಲಿ 37 ಸಾವಿರದ 479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎಸ್ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಪೂರಕ ಪರೀಕ್ಷೆಯಲ್ಲಿ 37 ಸಾವಿರದ 479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣ ಪ್ರಮಾಣ ಶೇ.39.59 ಇದೆ. ಇಂದು ಜುಲೈ 21ರಂದು ಮಧ್ಯಾಹ್ನ 12 ಗಂಟೆ ನಂತರ ಫಲಿತಾಂಶ ಇಲಾಖೆ ವೆಬ್ ಸೈಟ್ https://karresults.nic.in ನಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಇನ್ನು ಪರೀಕ್ಷೆ ನೋಂದಣಿ ಸಮಯದಲ್ಲಿ ವಿದ್ಯಾರ್ಥಿಗಳು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕವೂ ಇಲಾಖೆ ಫಲಿತಾಂಶ ಕಳುಹಿಸಲಿದೆ. 

2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com