ಸೋನಿಯಾ ಗಾಂಧಿ ಇಡಿ ವಿಚಾರಣೆ: ಮಂಗಳವಾರ ಶಾಂತಿಯುತ ಪ್ರತಿಭಟನೆ- ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು 50 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇದೀಗ ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್ ನೀಡಿದೆ. ಇದು ಅನಗತ್ಯವಾದದದ್ದು ಎಂದು ಅವರು ಹೇಳಿದ್ದಾರೆ.

ವಿಚಾರಣೆ ನೆಪದಲ್ಲಿ ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲಾಗುತ್ತಿದೆ. ಇಡಿ ತನಿಖೆ ವಿರೋಧಿಸಿ ಜುಲೈ 24 ರಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು, ಇದರಲ್ಲಿ  ಭಾಗವಹಿಸುವಂತೆ ಎಲ್ಲರನ್ನೂ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com