ದಕ್ಷಿಣ ಕನ್ನಡ: ದುಷ್ಕರ್ಮಿಗಳಿಂದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ

ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಕೊಲೆಯಾದ ಪ್ರವೀಣ್ ನೆಟ್ಟಾರು
ಕೊಲೆಯಾದ ಪ್ರವೀಣ್ ನೆಟ್ಟಾರು

ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ಇಂದು ತನ್ನ ಕೋಳಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದು, ಕೊಲೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಸದ್ಯ ಪುತ್ತೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪುತ್ತೂರು, ಬೆಳ್ಳಾರೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ನಡೆದ ಕೊಲೆಗೆ ಸೇಡು ತೀರಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಲ್ಲದೆ ಪ್ರವೀಣ್ ಅವರನ್ನು ಹತ್ಯೆ ಮಾಡಲು ಬಂದಿದ್ದ ದುಷ್ಕರ್ಮಿಗಳ ಬೈಕ್ ನಂಬರ್ ಕೇರಳದ ನೋಂದಣಿ ಸಂಖ್ಯೆಯಾಗಿದ್ದವು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಳೆದ ವಾರ 8 ಮಂದಿ ಯುವಕರ ತಂಡ ಒಬ್ಬ ಯುವಕನನ್ನು ಭೀಕರವಾಗಿ ಕೊಲೆ ಮಾಡಿತ್ತು. ಈ ಸಂಬಂಧ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com