ಕಚೇರಿಗೆ ತಡವಾಗಿ ಬರುವ ಸರ್ಕಾರಿ ನೌಕರರ ವಿರುದ್ಧ ಕ್ರಮ: ಮುಖ್ಯ ಕಾರ್ಯದರ್ಶಿ ಆದೇಶ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸೋಮವಾರ ಅವರು ಆದೇಶ ಹೊರಡಿಸಿದ್ದಾರೆ. ಸರಿಯಾದ ವೇಳೆಗೆ ಕೆಲಸಕ್ಕೆ ಹಾಜರುವಂತೆ ಆದೇಶ ಹೊರಡಿಸಿದ್ದರೂ, ಅನೇಕ ಮಂದಿ ಕಚೇರಿಗೆ ತಡವಾಗಿ ಬರುತ್ತಿರುವುದಾಗಿ ಅವರು ಹೇಳಿದ್ದಾರೆ.

ಇದು ಕೆಲಸದಲ್ಲಿನ ಬದ್ದತೆ ಕೊರತೆಯನ್ನು ತೋರಿಸುತ್ತದೆ. ನೌಕರರು ಬೆಳಗ್ಗೆ 10 ಗಂಟೆಗೂ ಮುನ್ನ ಕಚೇರಿಗೆ ಬರಬೇಕು, ಕಚೇರಿ ಅವಧಿ ಮುಗಿಯುವವರೆಗೂ ತಮ್ಮ ಕುರ್ಚಿಗಳಲ್ಲಿ ಕುಳಿತಿರಬೇಕು. ಅನುಮತಿ ಪಡೆದ ನಂತರ ಮಾತ್ರ ಅವರು
ಹೊರಗಡ ಹೋಗಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.

ಒಂದು ವೇಳೆ ನೌಕರರು ತಡವಾಗಿ ಬಂದರೆ ಅಥವಾ ಕಚೇರಿ ವೇಳೆಯಲ್ಲಿ ತಮ್ಮ ಕುರ್ಚಿಯಲ್ಲಿ ಕುಳಿತಿರದಿದ್ದರೆ, ಉನ್ನತ ಅಧಿಕಾರಿಗಳು ಕಾರಣಗಳೊಂದಿಗೆ ತಿಳಿಸಬೇಕು. ಅಂತಹ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಂದಿತಾ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com