ಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ, ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿಬೀಳುತ್ತೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆ

ಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಪ್ರಮೋದ್ ಮುತಾಲಿಕ್  ಆಗ್ರಹಿಸಿದ್ದಾರೆ. 
ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್

ಧಾರವಾಡ: ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗೆ ಪ್ರತಿಕ್ರಿಯೆ ನೀಡಿರುವವರು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ನೆಲೆಸಬೇಕಾದರೆ, ಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿ ಬೀಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. 

ವಾರದ ಹಿಂದೆಯೇ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎನ್ನಲಾಗುತ್ತಿದೆ. ಇಂತಹ ಕ್ರೌರ್ಯವನ್ನು ಹದ್ದುಬಸ್ತಿನಲ್ಲಿಡಬೇಕಾದರೆ, ಹಂತಕರನ್ನು ಒಂದೋ ಎನ್ ಕೌಂಟರ್ ಮಾಡಿ, ಇಲ್ಲವಾದಲ್ಲಿ ನ್ಯಾಯಾಂಗದ ಮೂಲಕ ತ್ವರಿತವಾಗಿ ನ್ಯಾಯ ಕೊಡಿಸಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿದ್ದಾರೆ. 

ಇತ್ತೀಚೆಗೆ ನಡೆದ ಹರ್ಷ ಹತ್ಯೆ ಪ್ರಕರಣದಲ್ಲಿ ಸರ್ಕಾರ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು. ಆದರೆ ಈಗ ಹರ್ಷನ ಹಂತಕರು ಜೈಲಿನಲ್ಲಿದ್ದುಕೊಂಡು ವಿಡೀಯೋ ಕಾಲ್ ಮಾಡುವ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಸರ್ಕಾರ ಇಂತಹ ಹಂತಕರನ್ನು ಹದ್ದುಬಸ್ತಿನಲ್ಲಿಡದೇ ಇದ್ದಲ್ಲಿ ಇನ್ನಷ್ಟು ಹಿಂದೂಗಳು ಬಲಿಯಾಗಬೇಕಾಗುತ್ತದೆ. ಹಿಂದೂ ಸಮಾಜ ತಿರುಗಿಬೀಳುತ್ತೆ ಎಂದು ಎಚ್ಚರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com