ಕೊಲೆ ಅದ ಮೇಲೆ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು?: ಎಚ್.ಡಿ. ಕುಮಾರಸ್ವಾಮಿ

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಮೇಲೆ ಅಪರಿಚಿತರು ಹತ್ಯೆಗೈದಿದ್ದು, ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದೆ. ಇನ್ನೊಂದೆಡೆ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ
Updated on

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆ ಸರಣಿ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ, ಏಕೆ?. ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರಿನ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ. ಈಗ ಕೊಲೆಯಾಗಿರುವ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೆ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣುವುದೇ ಇಲ್ಲ!. ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರ್ಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ದೈರ್ಯ ಇಲ್ಲ. ಈ ಅಸಹಾಯಕತೆಗೆ ಕಾರಣ ಏನು? ಎಂದು ಕೇಳಿದ್ದಾರೆ.

ಇನ್ನಷ್ಟು...

ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿರುವ ಮತ್ತಷ್ಟು ಟ್ವೀಟ್‌ಗಳು ಇಲ್ಲಿವೆ ನೋಡಿ...

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com