ಬಿಬಿಎಂಪಿ ಚುನಾವಣೆ: ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರೀಂ ಕೋರ್ಟ್ ಸೂಚನೆ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರಿಂ ಕೋರ್ಟ್ ಸೂಚಿಸಿದೆ. ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಲು ಸುಪ್ರಿಂ ಕೋರ್ಟ್ ಸೂಚಿಸಿದೆ. ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ಆದೇಶ ನೀಡಿದೆ.

ಬಿಬಿಎಂಪಿ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ ಖಾನಿಲ್ಕರ್ ಪೀಠ, ಎಂಟು ವಾರಗಳಲ್ಲಿ ಚುನಾವಣೆ ನಡೆಸಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದರು.

ವಾದ ಆಲಿಸಿದ ಪೀಠ ವರದಿ ಆಧರಿಸಿ ಇಂದಿನಿಂದ ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಆದೇಶ‌ ನೀಡಿತು. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com