ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ಉಡುಪಿ ಜಿಲ್ಲೆಯ ಪಡುಬಿದ್ರಿಯ ಅಪಾರ್ಟ್‌ಮೆಂಟ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿ ಹೆಜಮಾಡಿ ಆಲಡೆ ಪ್ರದೇಶದ ನಿವಾಸಿಯಾಗಿದ್ದು, ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಹೆಜಮಾಡಿಯಲ್ಲಿರುವ ತನ್ನ ಅಪಾರ್ಟ್‌ಮೆಂಟ್‌ಗೆ ಬರುವಂತೆ ಹೇಳಿ, ಮನೆಯ ಟೆರೇಸ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಸ್ಥಳೀಯರು ಯುವಕನ ಈ ಕೃತ್ಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ಬಳಿಕ ಆತನನ್ನು ಪೊಲೀಸರಿಗೆ ಹಿಡಿದು ಕೊಟ್ಟಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗೆ ಅಪರಾಧ ಮಾಡಲು ಸಹಾಯ ಮಾಡಿದ ಅಪ್ರಾಪ್ತ ಬಾಲಕನನ್ನು ಸಹ ವಶಕ್ಕೆ ತೆಗೆದುಕೊಂಡು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com