Monkeypox: ಬೆಂಗಳೂರಿಗೂ ಒಕ್ಕರಿಸಿತೇ ಮಂಕಿಪಾಕ್ಸ್?: ಆಫ್ರಿಕಾ ಪ್ರಜೆಯಲ್ಲಿ ಸೋಂಕು ಲಕ್ಷಣ, ಖಾಸಗಿ ಆಸ್ಪತ್ರೆಗೆ ದಾಖಲು!

ಭಾರತವೂ ಸೇರಿದಂತೆ ಜಗತ್ತಿನ 65ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿರುವ ಮಂಕಿಪಾಕ್ಸ್ ಸೋಂಕು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿತೇ ಎಂಬ ಭೀತಿ ಶುರುವಾಗಿದ್ದು, ಆಫ್ರಿಕಾ ಮೂಲದ ಪ್ರಜೆಯಲ್ಲಿ ಸೋಂಕಿನ ಶಂಕಿತ ಲಕ್ಷಣ ಕಂಡಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಕಿಪಾಕ್ಸ್ ಸಾಂದರ್ಭಿಕ ಚಿತ್ರ
ಮಂಕಿಪಾಕ್ಸ್ ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತವೂ ಸೇರಿದಂತೆ ಜಗತ್ತಿನ 65ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಕಂಡುಬಂದಿರುವ ಮಂಕಿಪಾಕ್ಸ್ ಸೋಂಕು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಕಾಲಿಟ್ಟಿತೇ ಎಂಬ ಭೀತಿ ಶುರುವಾಗಿದ್ದು, ಆಫ್ರಿಕಾ ಮೂಲದ ಪ್ರಜೆಯಲ್ಲಿ ಸೋಂಕಿನ ಶಂಕಿತ ಲಕ್ಷಣ ಕಂಡಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಗನ ಕಾಯಿಲೆ ಅಥವಾ ಮಂಕಿಪಾಕ್ಸ್ ಗೆ ತುತ್ತಾಗಿರುವ ಶಂಕಿತ ಆಫ್ರಿಕನ್ ಪ್ರಜೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕಿಸಲಾಗಿದ್ದು, ಅವರ ಮಾದರಿಗಳನ್ನು ಗುರುವಾರ ಸಂಜೆ ಪುಣೆಯ ಎನ್‌ಐವಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಆಸ್ಪತ್ರೆಯಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಳ್ಳಲು ಆಫ್ರಿಕನ್ ಪ್ರಜೆ ಜುಲೈ 4 ರಂದು ಇಥಿಯೋಪಿಯಾದಿಂದ ಬಂದಿದ್ದರು. ಅವರು ಡಯಾಲಿಸಿಸ್ ಮತ್ತು ಪೂರ್ವ-ಕಸಿ ಮೌಲ್ಯಮಾಪನಕ್ಕೆ ಒಳಗಾಗುತ್ತಿದ್ದರು. ಇವರ ಚರ್ಮದ ಮೇಲೆ ದದ್ದುಗಳು ಸೇರಿದಂತೆ ಮಂಕಿಪಾಕ್ಸ್‌ನ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರ ರಕ್ತ ಮತ್ತು ಚರ್ಮದ ಗಾಯಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಂಕಿತ ಆಫ್ರಿಕಾ ಪ್ರಜೆ ಇಥಿಯೋಪಿಯಾದಿಂದ ಬಂದವರಾಗಿರುವುದರಿಂದ ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಂತೆಯೇ ಆತನ ಮಾದರಿಯನ್ನು ಪರೀಕ್ಷೆ ರವಾನಿಸಲಾಗಿದ್ದು, ಇಲ್ಲಿಯವರೆಗೆ, ಇದು ಕರ್ನಾಟಕದಿಂದ ಪರೀಕ್ಷೆಗೆ ಕಳುಹಿಸಲಾದ ಮಂಗನ ಕಾಯಿಲೆಯ ಎರಡನೇ ಶಂಕಿತ ಮಾದರಿಯಾಗಿದೆ. ಮೊದಲ ಮಾದರಿಯು ಬ್ರಿಟನ್ ಗೆ ಪ್ರಯಾಣದ ಇತಿಹಾಸ ಹೊಂದಿರುವ ಬೆಂಗಳೂರಿನ ವ್ಯಕ್ತಿಯದ್ದಾಗಿತ್ತು ಮತ್ತು ಕಳೆದ ವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ಪುಣೆಯ NIV ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ನೆಗೆಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (BMRCI) ನಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ (VRDL) ಈಗಾಗಲೇ NIV ICMR ನಿಂದ ಮಂಗನ ಕಾಯಿಲೆಯ ಕಣ್ಗಾವಲುಗಾಗಿ ದೇಶದ 15 ಗೊತ್ತುಪಡಿಸಿದ ಲ್ಯಾಬ್‌ಗಳಲ್ಲಿ ಒಂದಾಗಿದೆ. ಬೆಂಗಳೂರಿನಿಂದ ಶಂಕಿತ ಪ್ರಕರಣಗಳ ಮಾದರಿಗಳನ್ನು VRDL ಸ್ವೀಕರಿಸಿದೆ ಮತ್ತು ಪುಣೆಯ NIV ಗೆ ಕಳುಹಿಸಲಾಗಿದೆ. ಪ್ರಯೋಗಾಲಯವನ್ನು ಗುರುವಾರದಿಂದ ಪರೀಕ್ಷೆಗೆ ಗುರುತಿಸಲಾಗಿದೆ, ಆದರೆ ಪರೀಕ್ಷಾ ಕಿಟ್‌ಗಳಿಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಮಾತನಾಡಿರುವ ಆರೋಗ್ಯ ಅಧಿಕಾರಿಗಳು "ನಾವು ಹೆಚ್ಚು ಜಾಗರೂಕರಾಗಿದ್ದೇವೆ. ಶಂಕಿತ ಪ್ರಕರಣಗಳು ಕಂಡುಬಂದಾಗ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡುವಂತೆ ನಾವು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದೇವೆ" ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com