ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ; ಪೊಲೀಸರ ಲಾಠಿಪ್ರಹಾರ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. (ಫೋಟೋ | ಪಿಟಿಐ)
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. (ಫೋಟೋ | ಪಿಟಿಐ)

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.

ರಾಜ್ಯ ಸರ್ಕಾರದ ವಿರುದ್ಧ ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸರ್ಕಾರದ ಗಮನ ಸೆಳೆಯಲು ಎಬಿವಿಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಗೃಹ ಸಚಿವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಗೃಹ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸಲು ಬಿಡಲಿಲ್ಲ. 

ಆಗ ಕಾರ್ಯಕರ್ತರು ಗೃಹ ಸಚಿವರ ಗೇಟ್ ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಇತ್ತೀಚೆಗೆ ಪ್ರವೀಣ್​​​ ನೆಟ್ಟಾರ್​​​​​ ಹತ್ಯೆ ಖಂಡಿಸಿ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದು, ಬಿಜೆಪಿ ಸರ್ಕಾರ ಇದ್ದರೂ ಹಿಂದುತ್ವ ವಾದಿಗಳ ಹತ್ಯೆ ಆಗ್ತಿದೆ, ಹಿಂದುತ್ವ ವಾದಿಗಳ ರಕ್ಷಣೆ ಮಾಡದ ಸರ್ಕಾರಕ್ಕೆ ಧಿಕ್ಕಾರ, ಅಂದು ಹರ್ಷ..ಇಂದು ಪ್ರವೀಣ..ನಾಳೆ ನಾವು ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ. 

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ  ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ಜಯಮಹಲ್ ನಲ್ಲಿ ಗೃಹ ಸಚಿವರ ಮನೆ ಮುಂದೆ ಪರಿಸ್ಥಿತಿ ಬಿಗಡಾಯಿಸಿದೆ. ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಸ್ಥಳದಿಂದ ಬೇರೆಡೆಗೆ ಕರೆದೊಯ್ದಿದ್ದಾರೆ.

ಎಬಿವಿಪಿ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಬಾಗಿಲಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ಧಾರೆ. ಕಾರ್ಯಕರ್ತರು ಗೇಟ್​ ಮುರಿದು ಒಳಗೆ ನುಗ್ಗಿದ್ಧಾರೆ. ಬಿಜೆಪಿ ಸರ್ಕಾರ ಇದ್ದರೂ ಹಿಂದುತ್ವ ವಾದಿಗಳ ಹತ್ಯೆ ಆಗುತ್ತಿದೆ. ಹಿಂದುತ್ವ ವಾದಿಗಳ ರಕ್ಷಣೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗುತ್ತಿದ್ಧಾರೆ. 

ರಾಜ್ಯದಲ್ಲಿ ಸರಣಿ ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಕರ್ತರ ಧರಣಿ ನಡೆಸುತ್ತಿದ್ದರು.ಎಬಿವಿಪಿ ಕಾರ್ಯಕರ್ತರನ್ನು ಎಳೆದೊಯ್ಯಲು ಪೊಲೀಸರು ಹರಸಾಹಸಪಟ್ಟರು. ಎಬಿವಿಪಿ ಕಾರ್ಯಕರ್ತರ ಆಕ್ರೋಶಕ್ಕೆ ಪೊಲೀಸರು ಹೈರಾಣಾಗಿ ಹೋದರು. ಪೊಲೀಸ್ ವಾಹನದ ಮುಂದೆ ಧರಣಿ ಕುಳಿತರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com