ಭಟ್ಕಳ: ISIS ಉಗ್ರ ಸಂಘಟನೆ ಬೆಂಬಲಿಗರನ್ನು ವಶಕ್ಕೆ ಪಡೆದ NIA 

ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ. 
ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ
ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ

ಭಟ್ಕಳ: ರಾಜ್ಯದಲ್ಲಿ ಭಯೋತ್ಪಾದಕರು, ಭಯೋತ್ಪಾದಕರ ಬೆಂಬಲಿಗರ ಬಂಧನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್- ಸಿರಿಯಾ (ISIS) ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಇಬ್ಬರನ್ನು ಭಟ್ಕಳದಲ್ಲಿ ಎನ್ಐಎ ವಶಕ್ಕೆ ಪಡೆದಿದೆ. 

ಐಎಸ್ಐಎಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ 30 ವರ್ಷದ ಅಬ್ದುಲ್ ಮುಕ್ತದೀರ್ ಹಾಗೂ ಆತನ ಸಹೋದರನನ್ನು ಎನ್ಐಎ ವಶಕ್ಕೆ ಪಡೆದಿದೆ.
 
ಸಾಮಾಜಿಕ ಜಾಲತಾಣದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಯ ಪರ ಲೈಕ್, ಕಾಮೆಂಟ್ ಮಾಡುತ್ತಿದ್ದ ವ್ಯಕ್ತಿ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿದ್ದ ಅಷ್ಟೇ ಅಲ್ಲದೇ ಐಸಿಸ್ ಬರಹಗಳನ್ನು ಭಾಷಾಂತರ ಮಾಡುತ್ತಿದ್ದ ಎಂಬ ಶಂಕೆಯ ಆಧಾರದಲ್ಲಿ ಇಬ್ಬರನ್ನೂ ಬಂಧಿಸಲಾಗಿದೆ. ಅಧಿಕಾರಿಗಳು ಬಂಧಿತ ವ್ಯಕ್ತಿಯನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಬೆಳಿಗ್ಗೆ 4 ಗಂಟೆ ವೇಳೆಗೆ ಈ ಕಾರ್ಯಾಚರಣೆ ನಡೆದಿದ್ದು ಅಬ್ದುಲ್ ಮುಕ್ತದೀರ್ ನ್ನು ಆತನ ನಿವಾಸದಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಕ್ಕೂ ಮುನ್ನ ಬೆಂಗಳೂರು ಹಾಗೂ ದೆಹಲಿ ಎನ್ಐಎ ಅಧಿಕಾರಿಗಳು ಕೆಲದಿನಗಳ ಕಾಲ ಆತನ ಚಲನವಲನಗಳನ್ನು ಗಮನಿಸುತ್ತಿದ್ದರು ಎನ್ನಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com