ಮಂಗಳೂರು ಹತ್ಯೆ: ಮೃತ ಮಸೂದ್, ಫಾಜಿಲ್‌ ಕುಟುಂಬಕ್ಕೆ ತಲಾ 30 ಲಕ್ಷ ರೂ ಆರ್ಥಿಕ ನೆರವು ಘೋಷಣೆ: ಮುಸ್ಲಿಂ ಸಮಿತಿ

ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರವನ್ನು ಅವಳಿ ಜಿಲ್ಲೆಗಳ ಎಲ್ಲಾ ಮುಸ್ಲಿಂ ವೇದಿಕೆಗಳ ಸಂಘಟನೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಶನಿವಾರ ಘೋಷಿಸಿದೆ.
ಮಂಗಳೂರಿನಲ್ಲಿ ಹತ್ಯೆಗೀಡಾದ ಫಾಜಿಲ್
ಮಂಗಳೂರಿನಲ್ಲಿ ಹತ್ಯೆಗೀಡಾದ ಫಾಜಿಲ್
Updated on

ಮಂಗಳೂರು: ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರವನ್ನು ಅವಳಿ ಜಿಲ್ಲೆಗಳ ಎಲ್ಲಾ ಮುಸ್ಲಿಂ ವೇದಿಕೆಗಳ ಸಂಘಟನೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಶನಿವಾರ ಘೋಷಿಸಿದೆ.

ನಗರದಲ್ಲಿರುವ ಸಮಿತಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಅವರ ಮನೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಭೆಯಲ್ಲಿ ಮಾಜಿ ಸಚಿವ ಯು.ಟಿ.ಖಾದರ್, ಮಾಜಿ ಶಾಸಕ ಮೊಯಿಯುದ್ದೀನ್ ಮತ್ತಿತರರು ಉಪಸ್ಥಿತರಿದ್ದರು. ಕ್ರೌಡ್ ಫಂಡಿಂಗ್ ಮೂಲಕ ಸಮಿತಿಯಿಂದ ಪರಿಹಾರವನ್ನು ನೀಡಲು ಮತ್ತು ಎರಡು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಕಾನೂನು ನೆರವು ನೀಡಲು ಸಭೆ ನಿರ್ಧರಿಸಿದೆ.

ದ.ಕ.ಜಿಲ್ಲೆಯಲ್ಲಿ ಮೊನ್ನೆ ನಡೆದ ಕೊಲೆ ಪ್ರಕರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲಾಡಳಿತ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಶಾಂತಿ ಸಭೆಯನ್ನು ಮುಸ್ಲಿಂ ಸಂಘಟನೆಗಳು ಬಹಿಷ್ಕರಿಸಿವೆ. ವಿಚಿತ್ರವೆಂದರೆ, ಆಡಳಿತ ಪಕ್ಷ ಮತ್ತು ಸಂಘ ಪರಿವಾರದ ಪ್ರಮುಖ ನಾಯಕರು ಕೂಡ ಈ ಶಾಂತಿ ಸಭೆಗೆ ಗೈರಾಗಿದ್ದರು. 10 ದಿನಗಳಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಮೂರು ಕೊಲೆಗಳ ಹಿನ್ನೆಲೆಯಲ್ಲಿ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಮತ್ತು ಇತರ ಅಧಿಕಾರಿಗಳು ಶಾಂತಿ ಸಭೆ ಕರೆದಿದ್ದರು. ಇನ್ನು ಮುಸ್ಲಿಂ ಪ್ರತಿನಿಧಿಗಳು ದೂರ ಉಳಿದಿದ್ದರಿಂದ ಶೀಘ್ರವೇ ಮತ್ತೊಂದು ಸಭೆ ಕರೆಯಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ. 

ಸಭೆ ಬಳಿಕ ಅಲೋಕ್ ಕುಮಾರ್ ಹೇಳಿದ್ದೇನು?
ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಭಾಗವಹಿಸುವವರು ನೀಡಿದ ಕೆಲವು ಪ್ರಮುಖ ಸಲಹೆಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದು, ಸ್ಥಳೀಯ ಮಾಧ್ಯಮಗಳು ಮತ್ತು ಟಿವಿ ಚಾನೆಲ್‌ಗಳು ಭಾವನಾತ್ಮಕ ವಿಷಯಗಳ ಬಗ್ಗೆ ಅರೆಬೆಂದ ಅಥವಾ ಸಂಪೂರ್ಣ, ಅಸತ್ಯ ವರದಿಗಳನ್ನು ಪ್ರಕಟಿಸುವುದನ್ನು ತಡೆಯುವುದು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವುದು. ಬೆಳ್ಳಾರೆಯಲ್ಲಿ ಲಾಠಿಚಾರ್ಜ್‌ಗೆ ಆದೇಶಿಸಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮತ್ತು ಕೊಲೆ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿರುವುದು.. ಸ್ಥಳೀಯ ಪೊಲೀಸರ ನೈತಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಕೆಲವರು ಭಾವಿಸಿದ್ದಾರೆ. ಜಿಲ್ಲೆಯ ಹೊರಗಿನವರಾದ್ದರಿಂದ ಸ್ಥಳೀಯ ಭಾಷೆ ಗೊತ್ತಿಲ್ಲದ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿರುವುದು ಗುಪ್ತಚರ ಸಂಗ್ರಹದ ಮೇಲೆ ಪರಿಣಾಮ ಬೀರಿದೆ ಎಂದು ಇತರರು ಹೇಳಿದರು. ಜನರೊಂದಿಗೆ ಬೆರೆಯಲು ಬೀಟ್, ಮೊಹಲ್ಲಾ ಮತ್ತು ಯುವ ಸಮಿತಿಗಳನ್ನು ಒಂದು ತಿಂಗಳೊಳಗೆ ರಚಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದರು.

ಸಂತ್ರಸ್ಥ ಕುಟುಂಬಗಳಿಗೆ ನೆರವು
ಈ ಮಧ್ಯೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್‌ರ ಸ್ವಗೃಹದಲ್ಲಿ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಜಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಿತು. ಅಂತೆಯೇ ಕ್ರೌಡ್ ಫಂಡಿಂಗ್ ಮೂಲಕ ಸಮಿತಿಯಿಂದ ಪರಿಹಾರವನ್ನು ನೀಡಲು ಮತ್ತು ಎರಡು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಕಾನೂನು ನೆರವು ನೀಡಲು ಸಭೆ ನಿರ್ಧರಿಸಿದೆ.

ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೇವಲ ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತನ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ 25 ಲಕ್ಷ ರೂ. ಪರಿಹಾರ ನೀಡಿರುವುದನ್ನು ಮತ್ತು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿ ನೀಡದ ಮುಖ್ಯಮಂತ್ರಿಯವರ ಅಮಾನವೀಯ ನಿಲುವಿಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು. ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವjg ಅನುಗ್ರಹಿಸಲೆಂದು ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಸಭೆಯಲ್ಲಿ ಸಾಂತ್ವನ ಹೇಳಿದರು.

ಸಭೆಯಲ್ಲಿ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವಾ, ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಕೆ. ಅಶ್ರಫ್, ಹನೀಫ್ ಹಾಜಿ ಬಂದರ್, ಸೈಯದ್ ಅಹ್ಮದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

ದ.ಕ.ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ದ.ಕ.ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟ, ಮುಸ್ಲಿಂ ವರ್ತಕರ ಸಂಘ, ಮುಸ್ಲಿಂ ಜಸ್ಟೀಸ್ ಫೋರಂ ಕರ್ನಾಟಕ ಮತ್ತಿತರ ಸಂಘಟನೆಗಳು ಶಾಂತಿ ಸಭೆಯನ್ನು ಬಹಿಷ್ಕರಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com