ಬೆಂಗಳೂರಿನಲ್ಲಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದ ವ್ಯಕ್ತಿ ಹತ್ಯೆ ಪ್ರಕರಣದ ಅಪರಾಧಿ!
ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಬೆಂಗಳೂರಿನಲ್ಲಿ ನಡೆದ ದಾಳಿಯ ಆರೋಪಿ ಓರ್ವ ಕೊಲೆಗಾರನಾಗಿದ್ದು ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಎಂಬ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ.
Published: 01st June 2022 09:57 PM | Last Updated: 01st June 2022 09:57 PM | A+A A-

ಮಸಿ ದಾಳಿಗೊಳಗಾಗಿರುವ ರಾಕೇಶ್ ಟಿಕಾಯತ್.
ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಬೆಂಗಳೂರಿನಲ್ಲಿ ನಡೆದ ದಾಳಿಯ ಆರೋಪಿ ಓರ್ವ ಕೊಲೆಗಾರನಾಗಿದ್ದು ಸನ್ನಡತೆಯ ಆಧಾರದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಎಂಬ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಈ ಬಗ್ಗೆ ಅಪರಾಧ ವಿಭಾಗದ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದು, ಟಿಕಾಯತ್ ಗೆ ಮಸಿ ಬಳಿದ ವ್ಯಕ್ತಿ ಶಿವಕುಮಾರ್ ಅತ್ರಿ (52) ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿದ್ದು, ಸನ್ನಡತೆಯ ಆಧಾರದಲ್ಲಿ 2015 ರಲ್ಲಿ ಹಾಸನದ ಜೈಲಿನಿಂದ ಬಿಡುಗಡೆಯಾಗಿದ್ದ ಎಂದು ತಿಳಿಸಿದ್ದಾರೆ.
ಈ ವ್ಯಕ್ತಿಗೆ ಟಿಕಾಯತ್ ಮೇಲೆ ದಾಳಿ ನಡೆಸುವಂತೆ ಪ್ರಚೋದನೆ ನೀಡಿರಬಹುದಾದವರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶರಣಪ್ಪ ತಿಳಿಸಿದ್ದಾರೆ. ಮಸಿ ಎರಚಿದ ಪ್ರಕರಣದಲ್ಲಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ನಡೆಸಲಾಗುತ್ತಿದೆ.