
ಸಾಂದರ್ಭಿಕ ಚಿತ್ರ
ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ಹಾಸನ ನಗರಸಭೆ ಜೆಡಿಎಸ್ ಸದಸ್ಯ ಪ್ರಶಾಂತ್ ಅವರನ್ನು ದುಷ್ಕರ್ಮಿಗಳು ಬುಧವಾರ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಇಂದು ಸಂಜೆ ಹಾಸನ ನಗರದ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಪ್ರಶಾಂತ್ ಅವರು ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.