ಮುಖ್ಯಮಂತ್ರಿಗಳಿಂದ ರಾಜ್ಯದ 47.83 ಲಕ್ಷ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಸಹಾಯಧನ ವರ್ಗಾವಣೆ
ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47. 83 ಲಕ್ಷ ರೈತರಿಗೆ 956. 71 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ವರ್ಗಾಯಿಸಿದ್ದಾರೆ.
Published: 02nd June 2022 03:35 PM | Last Updated: 02nd June 2022 03:44 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಸಿ. ಪಾಟೀಲ್ ಮತ್ತಿತರರು
ಬೆಂಗಳೂರು: ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47. 83 ಲಕ್ಷ ರೈತರಿಗೆ 956. 71 ಕೋಟಿ ರೂ.ಗಳ ಆರ್ಥಿಕ ಸಹಾಯಧನವನ್ನು ವರ್ಗಾಯಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ರೈತರ ಖಾತೆಗಳನ್ನು ಸಹಾಯಧನವನ್ನು ಮುಖ್ಯಮಂತ್ರಿ ವರ್ಗಾಯಿಸಿದ್ದರು. 2018-19ರಿಂದ 2021-22ರವರೆಗೆ ಭಾರತದ ಸರ್ಕಾರದಿಂದ ಅನುಮೋದಿಸಲ್ಪಟ್ಟ ರಾಜ್ಯದ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂಪಾಯಿ ಪಾವತಿಯಾದಂತಾಗಿದೆ. 2021-22ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975. 12 ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗವಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯ ಅತಿ ಹೆಚ್ಚು ಅಂದರೆ ಶೇ 96 ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದೆ. ಕಳೆದ ಬಾರಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿ ಇಲಾಖೆಗೆ ಪ್ರಶಸ್ತಿ ಲಭಿಸಿದೆ ಎಂದು ಅವರು ಹೇಳಿದ್ದಾರೆ.
2019 ರಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ ಅರ್ಹ ರೈತರಿಗೆ ಹೆಚ್ಚುವರಿಗೆ 4 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡಲಾಗುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.