ಮೂರು ಅಲೆಗಳಲ್ಲೂ ಕೋವಿಡ್ ನಿಂದ ಪಾರಾಗಿದ್ದ ಆರೋಗ್ಯ ಸಚಿವ ಸುಧಾಕರ್ ಗೆ ಕೊರೋನಾ ಪಾಸಿಟಿವ್
ಮೂರು ಅಲೆಗಳಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
Published: 02nd June 2022 11:02 PM | Last Updated: 02nd June 2022 11:02 PM | A+A A-

ಡಾ ಕೆ ಸುಧಾಕರ್
ಬೆಂಗಳೂರು: ಮೂರು ಅಲೆಗಳಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಆರೋಗ್ಯ ಸಚಿವರು, ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
ಇದನ್ನು ಓದಿ: ರಾಜ್ಯದಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 276 ಸೇರಿ 297 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಸುಧಾಕರ್ ತಿಳಿಸಿದ್ದಾರೆ.
ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.
— Dr Sudhakar K (@mla_sudhakar) June 2, 2022
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.
ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ.